HomeMusicಜೇಮ್ಸ್' ಜತೆ 'ಬೈರಾಗಿ' ಟೀಸರ್

ಜೇಮ್ಸ್’ ಜತೆ ‘ಬೈರಾಗಿ’ ಟೀಸರ್

ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್’ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ. ‘ಜೇಮ್ಸ್‌’ ಬಿಡುಗಡೆಯಾಗುವ ಎಲ್ಲಾ ಪರದೆಗಳಲ್ಲೂ ‘ಬೈರಾಗಿ’ ದರ್ಶನವಾಗಲಿದೆ ಎಂಬುದು ವಿಶೇಷ.

ಪುನೀತ್ ಅವರ ಸವಿನೆನಪಿಗಾಗಿ ಈ ಟೀಸರ್ ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ‘ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಮ್ಮ ತಂಡದ ಜತೆ ಅಪ್ಪು ಒಡನಾಟವಿದೆ. ಹೀಗಾಗಿ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ‘ಬೈರಾಗಿ’ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ. ಇದು ಪುನೀತ್ ಹಾಗೂ ಶಿವಣ್ಣನ ಅಭಿಮಾನಿಗಳಿಗೆ ಸಂತಸದ ವಿಷಯ’ ಎಂಬಿದು ಚಿತ್ರತಂಡದ ಅನಿಸಿಕೆ.

ವಿಜಯ್ ಮಿಲ್ಟನ್‌ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣ ಸಾರ್ಥಕ ‘ಕೃಷ್ಣ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ‘ಟಗರು’ ಬಳಿಕ ‘ಡಾಲಿ’ ಧನಂಜಯ್ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಜತೆ ನಟಿಸಿದ್ದಾರೆ. ಹಿರಿಯ ನಟ ಶಶಿಕುಮಾರ್, ಅಂಜಲಿ, ಯಶ ಶಿವಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಕೂಡಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದಾರೆ.

Must Read

spot_img
Share via
Copy link
Powered by Social Snap