HomeNewsನವೆಂಬರ್ 19 ಕ್ಕೆ "ಮುಗಿಲ್ ಪೇಟೆ" ಚಿತ್ರ ತೆರೆಗೆ.

ನವೆಂಬರ್ 19 ಕ್ಕೆ “ಮುಗಿಲ್ ಪೇಟೆ” ಚಿತ್ರ ತೆರೆಗೆ.

ಮನು ರವಿಚಂದ್ರನ್ ಅಭಿನಯದ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಅಪಾರ ಮೆಚ್ಚುಗೆ.

ಕನ್ನಡ ಚಿತ್ರರಂಗಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕೊಡುಗೆ ಅಪಾರ.
ಈಗ ಅವರ ಪುತ್ರ ಮನು ಕೂಡ “ಮುಗಿಲ್ ಪೇಟೆ” ಮೂಲಕ ಯಶಸ್ಸಿನ ಹೆಜ್ಜೆಯಿಡಲು ಸಜ್ಜಾಗಿದ್ದಾರೆ.‌

ಮನು ಅಭಿನಯದ “ಮುಗಿಲ್ ಪೇಟೆ” ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ. ನವೆಂಬರ್ 19 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಚಿತ್ರದ ಬಿಡುಗಡೆ ದಿನಾಂಕ ತಿಳಿಸಲು‌ ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

“ಮುಗಿಲ್ ಪೇಟೆ” ನನ್ನ ಕನಸು. ಇಡೀ ಚಿತ್ರತಂಡದ ಶ್ರಮದ ಫಲವಾಗಿ ಇಂದು ನಮ್ಮ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ.
ತೊಂಬತ್ತು ದಿನಗಳ ಕಾಲ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಸಕಲೇಶಪುರ, ಕುಂದಾಪುರ, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರೀಕರಣ ನಡೆಸಿದ್ದೇವೆ. ಸಂಬಂಧಗಳಿಗೆ ಬೆಲೆ ಕೊಡುವ ಕುಟುಂಬವೊಂದು. ಸಂಬಂಧಗಳನ್ನು ಕಡೆಗಾಣಿಸುವ ಕುಟುಂಬ ಮತ್ತೊಂದು. ಈ ಎರಡು ಕುಟುಂಬದ ಎರಡು ಜೀವಗಳ ನಡುವೆ ಪ್ರೀತಿ‌ ಮಾಡಿದಾಗ ಏನಾಗುತ್ತದೆ ಎಂಬುದೆ “ಮುಗಿಲ್ ಪೇಟೆ”ಯ ಕಥಾವಸ್ತು. ಇದು ಒಂದು ಜಾನರ್ ನ ಸಿನಿಮಾ ಅಲ್ಲ.‌ ಕೌಟುಂಬಿಕ ಸನ್ನಿವೇಶ, ಪ್ರೀತಿ, ಸಾಹಸ, ಉತ್ತಮ ಹಾಸ್ಯ ಎಲ್ಲವೂ ನಮ್ಮ ಸಿನಿಮಾದಲ್ಲಿದೆ. ಈ ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಭರತ್ ಎಸ್ ನಾವುಂದ್.

ಎಲ್ಲರ ಸಹಾಯದಿಂದ ನಮ್ಮ ಚಿತ್ರ ಬಿಡುಗಡೆ ಹಂತ ತಲುಪಿದೆ. ಟ್ರೇಲರ್ ಹಾಗೂ ಹಾಡು ಜನಪ್ರಿಯವಾಗಿದೆ. ಇದನ್ನು ನೋಡಿದವರು ನನ್ನ ಪಾತ್ರ ಮೆಚ್ಚಿಕೊಂಡಿದ್ದಾರೆ‌. ಚಿತ್ರಕ್ಕೂ ಜನಮನ್ನಣೆ ಸಿಗುವ ಭರವಸೆಯಿದೆ.
ಸಾಧುಕೋಕಿಲ, ರಂಗಾಯಣ
ರಘು, ತಾರಾ, ಅವಿನಾಶ್ ಅವರಂತಹ ಉತ್ತಮ ಕಲಾವಿದರೊಡನೆ ಅಭಿನಯಿಸಿದ್ದ ಅನುಭವ ನಿಜಕ್ಕೂ ಮರೆಯುವ ಹಾಗಿಲ್ಲ. ನಾಯಕಿ ಕಯಾದು ಅವರ ಅಭಿನಯ ಸೂಪರ್. ಚಿತ್ರದ ತುಣುಕು ಹಾಗೂ ಹಾಡುಗಳನ್ನು ಅಪ್ಪನಿಗೆ ತೋರಿಸಿದೆ. ಇಷ್ಟಪಟ್ಟರು. ಅವರ ಆಶೀರ್ವಾದ ಸದಾ ಇರುತ್ತದೆ ಎಂದರು ನಾಯಕ ಮನು.

ನಾನು ಮೊದಲ ಬಾರಿಗೆ ಹದಿನೇಳು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರತಂಡದವರು ಇದನ್ನು ಲಿಮ್ಕ ದಾಖಲೆಗೆ ಕಳುಹಿಸುತ್ತೇವೆ ಎನ್ನುತ್ತಿದ್ದಾರೆ. ಸಂತೋಷ. ಆದರೆ ಯಾವ ಪಾತ್ರಗಳು ಅಂತ ಈಗ ಹೇಳುವುದಿಲ್ಲ. ಚಿತ್ರದಲ್ಲೇ ನೋಡಿ ಆನಂದಿಸಿ ಎಂದರು ಸಾಧುಕೋಕಿಲ.

ನಾನು ಮೊದಲು ಬಣ್ಣ ಹಚ್ಚಿದ್ದು ರವಿಚಂದ್ರನ್ ಅವರ ಮನೆಯಲ್ಲಿ. ಈಗ ಅವರ ಮಗನೊಡನೆ ನಟಿಸಿದ್ದೇನೆ. ಭಾಗವತರ ಪಾತ್ರ ನಿರ್ವಹಣೆ ಮಾಡಿದ್ದೇನೆ. ನಿಗದಿಯಂತೆ ಚಿತ್ರೀಕರಣ ನಡೆಸಿದ ನಿರ್ದೇಶಕರ ಕಾರ್ಯವೈಖರಿ ಶ್ಲಾಘನೀಯ. ಮನು ಸೇರಿದಂತೆ ಎಲ್ಲರ ಅಭಿನಯ ಅದ್ಭುತ ಎಂದು ರಂಗಾಯಣ ರಘು ತಿಳಿಸಿದರು.

ಒಂದು ಚಿತ್ರ ಮಾಡಲು ಇಡೀ ತಂಡದ ಸಹಕಾರ ಅಗತ್ಯ. ಚಿತ್ರರಂಗದಲ್ಲಿ ನಾನು ಮಗು ಇದ್ದ ಹಾಗೆ. ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ರಕ್ಷ ವಿಜಯಕುಮಾರ್.

ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್, ಕಲಾವಿದರಾದ ಕಾಕ್ರೋಜ್ ಸುಧಿ, ಮೇಘಶ್ರೀ, ಅಪ್ಪಣ್ಣ ತಮ್ಮ ಅನುಭವವನ್ನು ಹಂಚಿಕೊಂಡರು. ಆನಂದ್ ಹಾಗೂ ಎಫೆಕ್ಟ್ ರಾಜನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಚಿತ್ರ ಉತ್ತಮವಾಗಿ ಮೂಡಿ ಬರಲು ಶ್ರಮಿಸುತ್ತಿರುವ ಮನು ಅವರ ಸಹೋದರ ವಿಕ್ರಂ ಅವರನ್ನು ಚಿತ್ರತಂಡದ ಪ್ರತಿಯೊಬ್ಬರು ವಿಶೇಷವಾಗಿ ಅಭಿನಂದಿಸಿದರು.

Previous article
ಚಮಕ್ ಜೋಡಿ ‘ಸಖತ್’ ಟೀಸರ್ ರಿಲೀಸ್…ಇದು ಸಿಂಪಲ್ ಸುನಿ ಡೈಲಾಗ್ ಸ್ಪೆಷಲ್!
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಮೋಸ್ಟ್ ಅವೇಟೇಡ್ ಸಿನಿಮಾ ಸಖತ್. ಪೋಸ್ಟರ್ ಹಾಗೂ ಸಾಂಗ್ ಮೂಲಕವೇ ಹೊಸತನ ತೆರೆದಿಟ್ಟಿರೋ ಸಖತ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಗಣೇಶ್ ಸ್ಟೈಲೀಶ್ ಲುಕ್.. ಸುನಿ ಡೈಲಾಗ್ ಕಿಕ್.. ಜೂಡಾ ಸ್ಯಾಂಡಿ ಮ್ಯೂಸಿಕ್.. ಸಂತೋಷ್ ಕ್ಯಾಮೆರಾ ವರ್ಕ್.. ನಿಶ್ವಿಕಾ ನಾಯ್ಡು ಇನೋಸೆಂಟ್ ಆಕ್ಟಿಂಗ್.. ಟೋಟಲಿ ಟೀಸರ್ ಕಂಪ್ಲೀಟ್ ಎಂಟರ್ ಟ್ರೈನ್ ಮೆಂಟ್ ಪ್ಯಾಕ್ಡ್.
ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ಗಣೇಶ್ ಅದ್ಭುತವಾಗಿ ನಟಿಸಿದ್ದು, ಸದಾ ಡಿಫರೆಂಟ್ ಡೈಲಾಗ್ ಕೊಡೋ ಸುನಿ ಡೈಲಾಗ್ಸ್ ಬಗ್ಗೆ ಹೇಳೋ ಆಗಿಲ್ಲ. ಸಖತ್ ಪಂಚಿಂಗ್ ಡೈಲಾಗ್ ನೋಡುಗರನ್ನು ಬಿದ್ದು ಬಿದ್ದು ನಗಿಸುವಂತಿದೆ. ರಿಲೀಸ್ ಆದ ಕೆಲ ಗಂಟೆಗಳಲ್ಲಿಯೇ ಸಖತ್ ವೈರಲ್ ಆಗ್ತಿರೋ ಸಖತ್ ಟೀಸರ್, 2021ರ ಬೆಸ್ಟ್ ಕಾಮಿಡಿ ಟೀಸರ್ ಆಗಿ ಅನ್ನೋ ಬ್ರ್ಯಾಂಡ್ ತನ್ನದಾಗಿಸಿಕೊಂಡಿದೆ.
ಸಿಂಪಲ್ ಸುನಿ ಓಂಕಾರ ಹಾಕಿರುವ ಸಖತ್ ಸಿನಿಮಾದಲ್ಲಿ ಮುಗುಳುನಗೆ ಹುಡ್ಗ ಗಣಿ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಣೇಶ್ ಗೆ ಜೋಡಿಯಾಗಿ ಬೊಗಸೆ ಕಣ್ಗಳ ಚೆಲುವೆ ನಿಶ್ವಿಕಾ ನಾಯ್ಡು ಬಣ್ಣ ಹಚ್ಚಿದ್ದಾರೆ. ಇದೊಂದು ಕಾಮಿಡಿ ಕಂ ಕ್ರೈಮ್ ಥಿಲ್ಲರ್ ಶೈಲಿಯ ಸಿನಿಮಾ. ಟಿವಿ ರಿಯಾಲಿಟಿ ಶೋ, ಮರ್ಡರ್ ಹಾಗೂ ಕೋರ್ಟ್ ಕೇಸ್ ಸುತ್ತ ಇಡೀ ಸಿನಿಮಾವನ್ನು ಎಣೆಯಲಾಗಿದೆ.
ಕೆ ವಿ ಎನ್ ಪ್ರೊಡಕ್ಷನ್ ಬ್ಯಾನರ್ ನಡಿ ತಯಾರಾಗಿರುವ ಸಖತ್ ಸಿನಿಮಾಕ್ಕೆ ನಿಶಾ ವೆಂಕಟ್ ಕೋಣಂಕಿ ಮತ್ತು ಸುಪ್ರಿತ್ ಬಂಡವಾಳ ಹೂಡಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾ ವರ್ಕ್, ಶಾಂತ ಕುಮಾರ್ ಸಂಕಲನ, ಜ್ಯೂಡ ಸ್ಯಾಂಡಿ ಸಂಗೀತ ಸಿನಿಮಾಕ್ಕಿದೆ. ಈಗಾಗಲೇ ಸೆನ್ಸಾರ್ ಮುಗಿಸಿರುವ ಸಖತ್ ಸಿನಿಮಾ ನವೆಂಬರ್ 12ರಂದು ಥಿಯೇಟರ್ ಅಂಗಳ ಪ್ರವೇಶಿಸಲಿದೆ.
Next article

Must Read

spot_img

Deprecated: preg_replace(): Passing null to parameter #3 ($subject) of type array|string is deprecated in /home/u452565381/domains/kannadabeatz.com/public_html/wp-includes/kses.php on line 1745

Deprecated: preg_replace(): Passing null to parameter #3 ($subject) of type array|string is deprecated in /home/u452565381/domains/kannadabeatz.com/public_html/wp-includes/kses.php on line 1745
Share via
Copy link
Powered by Social Snap