HomeNewsವಿನಯ್ ಚಂದ್ರ ನಿರ್ದೇಶನದಲ್ಲಿ ಬರುತ್ತಿದೆ "ಭಾರತದ ಕೋಗಿಲೆ" ಯ ಬಯೋಪಿಕ್.

ವಿನಯ್ ಚಂದ್ರ ನಿರ್ದೇಶನದಲ್ಲಿ ಬರುತ್ತಿದೆ “ಭಾರತದ ಕೋಗಿಲೆ” ಯ ಬಯೋಪಿಕ್.

ಸರೋಜಿನಿ ನಾಯ್ಡು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸೋನಾಲ್ ಮಾಂಟೆರೊ ಹಾಗೂ ಶಾಂತಿಪ್ರಿಯ.

“ಭಾರತದ ಕೋಗಿಲೆ’ ಎಂದೇ ಜನಪ್ರಿಯರಾದ ಸರೋಜಿನಿ ನಾಯ್ಡು ಕುರಿತ ಬಯೋಪಿಕ್ ಕುರಿತಾದ ಸಿನಿಮಾ ಬರುತ್ತಿದೆ. ವಿನಯ್ ಚಂದ್ರ ನಿರ್ದೇಶನದ ಈ ಚಿತ್ರವು ಇನ್ನಷ್ಟೇ ಶುರುವಾಗಬೇಕಿದ್ದು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಚರಣ್ ಸುವರ್ಣ, ಹನಿ ಚೌಧರಿ ಮತ್ತು ಸಿ.ಬಿ. ಕುಲಕರ್ಣಿ ಜತೆಯಾಗಿ ಈ ಚಿತ್ರವನ್ನು ವಿಸ್ತಾ ಫಿಲಂಸ್ ಮೂಲಕ ನಿರ್ಮಿಸುತ್ತಿದ್ದಾರೆ. ಸರೋಜಿನಿ ನಾಯ್ಡು ಅವರ ಚಿಕ್ಕ ವಯಸ್ಸಿನ ಪಾತ್ರದಲ್ಲಿ
ಸೋನಲ್ ಮಾಂಟೆರೊ ನಟಿಸಿದರೆ, ಹಿರಿವಯಸ್ಸಿನ ಪಾತ್ರವನ್ನು ಶಾಂತಿಪ್ರಿಯ ಮಾಡುತ್ತಿದ್ದಾರೆ. ಒಂದು ಕಾಲದಲ್ಲಿ ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಜನಪ್ರಿಯ ನಾಯಕಿಯಾಗಿದ್ದ ಶಾಂತಿಪ್ರಿಯ, ಈ ಚಿತ್ರದ ಮೂಲಕ 28 ವರ್ಷಗಳ ನಂತರ ಅಭಿನಯಕ್ಕೆ ವಾಪಸ್ಸಾಗುತ್ತಿದ್ದಾರೆ.

28 ವರ್ಷಗಳ ನಂತರ ನಟನೆಗೆ ವಾಪಸ್ಸಾಗಿದ್ದೇನೆ. ಇಂಥದ್ದೊಂದು ಅವಕಾಶಕ್ಕೆ ಧನ್ಯವಾದಗಳು. ಇಲ್ಲಿ ಸರೋಜಿನಿ ನಾಯ್ಡು ಅವರ ಪಾತ್ರ ನಿರ್ವಹಿಸುತ್ತಿದ್ದು, ಪಾತ್ರಕ್ಕೆ ಶಕ್ತಿಮೀರಿ ಜೀವ ತುಂಬುವುದಕ್ಕೆ ಪ್ರಯತ್ನಿಸುತ್ತೇನೆ ಎನ್ನುತ್ತಾರೆ ಹಿರಿಯ ನಟಿ ಶಾಂತಿಪ್ರಿಯ.

ಹಿತೇನ್​ ತೇಜ್ವಾನಿ (ಮುಂಬೈ ನಟ) ಮಾತನಾಡುತ್ತಾ, ಸರೋಜಿನಿ ನಾಯ್ಡು ಅವರ ಜೀವನದಲ್ಲಿ ನಡೆದ ಹಲವು ಪ್ರಮುಖ ವಿಷಯಗಳನ್ನು ಈ ಚಿತ್ರದಲ್ಲಿ ತೆರೆದಿಡಲಾಗುತ್ತಿದೆ. ನಾನು ಸರೋಜಿನಿ ಅವರ ಪತಿ ಗೋವಿಂದರಾಜುಲು ನಾಯ್ಡು ಅವರ ಪಾತ್ರ ನಿರ್ವಹಿಸುತ್ತಿದ್ದೇನೆ. ಸರೋಜಿನಿ ಅವರ ಬಗ್ಗೆ ಜನರಿಗೆ ಅಷ್ಟಾಗಿ ಗೊತ್ತಿಲ್ಲ. ನಿಜ ಹೇಳಬೇಕೆಂದರೆ, ಅವರಿಗೆ ಗೋವಿಂದ್​ ರಾಜುಲುಬೆನ್ನೆಲುಬಾಗಿದ್ದರು. ಕೊನೆಯವರೆಗೂ ಸಹಕಾರ, ಪ್ರೋತ್ಸಾಹ ನೀಡಿದರು. ಕುಟುಂಬ ಮತ್ತು ಮಕ್ಕಳ ಬಗ್ಗೆ ಯೋಚನೆ ಬೇಡ ಎಂದು ಆಕೆಯನ್ನು ಹುರಿದುಂಬಿಸಿದರು. ಆಕೆಗೆ ಏನು ಇಷ್ಟವಿತ್ತೋ, ಅದೆಲ್ಲವನ್ನೂ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟರು ಎಂದು ತಮ್ಮ ಪಾತ್ರ ವಿವರಣೆ ನೀಡಿದರು.

ನನಗೆ ಮೊದಲಿನಿಂದಲೂ ಒಂದು ಬಯೋಪಿಕ್​ನಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಅದು ಇಷ್ಟು ಚಿಕ್ಕ ವಯಸ್ಸಿನಲ್ಲೇ ಸಿಗುತ್ತದೆ ಎಂಬ ನಂಬಿಕೆ ಇರಲಿಲ್ಲ. ಚರಣ್​ ಸುವರ್ಣ ಮತ್ತು ಹನಿ ಚೌಧರಿ ನನಗೆ ಸುಮಾರು ಏಳು ವರ್ಷಗಳಿಂದ ಪರಿಚಿತರು. ನನ್ನ ಬ್ಯುಸಿನೆಸ್​ ಪಾರ್ಟನರ್​ಗಳು ಸಹ. ಕಥೆ ಹೇಳಿದಾಗ ಬಹಳ ಖುಷಿ ಆಯಿತು. ಸರೋಜಿನಿ ಅವರ ಚಿಕ್ಕವಯಸ್ಸಿನ ಪಾತ್ರ ಮಾಡುತ್ತಿದ್ದೇನೆ. ಅವರ ಕಾಲೇಜಿನ ದಿನಗಳು ಮತ್ತು ರಾಜಕೀಯಕ್ಕೆ ಎಂಟ್ರಿ ಕೊಡುವುದಕ್ಕಿಂತ ಮುಂಚಿನ ಪಾತ್ರ ಮಾಡುತ್ತಿರುವುದಾಗಿ ಸೋನಾಲ್ ಮಾಂಟೆರೊ ತಿಳಿಸಿದರು.

ಕಳೆದ ಎಂಟು ವರ್ಷಗಳಿಂದ ಸರೋಜಿನಿ ಅವರ ಬಗ್ಗೆ ರೀಸರ್ಚ್​ ಮಾಡುತ್ತಿದ್ದೇನೆ. ಅವರು ಆಗಿನ ಕಾಲಕ್ಕೆ ಸ್ಕಾಲರ್​ಸಿಪ್​ ಪಡೆದು, ಲಂಡನ್​ನಲ್ಲಿ ಓದಿದವರು. ಅವರಿಗೆ ಹಲವು ಭಾಷೆಗಳು ಗೊತ್ತಿತ್ತು. ಭಾರತದ ಪ್ರತಿನಿಧಿಯಾಗಿ ಅವರು ಹಲವು ದೇಶಗಳಿಗೆ ಹೋಗಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. 50 ಡಿಗ್ರಿ ಬಿಸಿಲಿನಲ್ಲೂ ಮೂರು ದಿನಗಳ ಕಾಲ ನೀರು ಕುಡಿಯದೇ ಹೋರಾಟ ಮಾಡಿದರು. ಅವರ ಈ ಹೋರಾಟ ಎಲ್ಲರಿಗೂ ಗೊತ್ತಾಗಬೇಕು ಎಂದು ಈ ಚಿತ್ರ ಮಾಡುತ್ತಿದ್ದೇವೆ ಎಂದು ಕಥೆಗಾರ ಧೀರಜ್ ಮಿಶ್ರ ಹೇಳಿದರು.

ಇಲ್ಲಿ ಸರೋಜಿನಿ ಅವರ ಗೊತ್ತಿಲ್ಲದ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದೇವೆ. ಆಕೆ ಹೇಗೆ ಸ್ವಾತಂತ್ರ್ಯ ಹೋರಾಟಗಾರ್ತಿ
ಯಾದರು, ಇಂಡಿಯನ್​ ನ್ಯಾಷನಲ್​ ಕಾಂಗ್ರೆಸ್​ನ ಮೊದಲ ಅಧ್ಯಕ್ಷೆ ಹೇಗಾದರೂ ಮುಂತಾದ ಹಲವು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ.
ಈ ಚಿತ್ರವನ್ನು ನಿರ್ದೇಶಿಸುವುದರ ಜತೆಗೆ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದೇನೆ. ಇದೊಂದು ಬಹಳ ಸವಾಲಿನ ಕೆಲಸ. 1890ರ ಕಾಲಘಟ್ಟದಲ್ಲಿನ ಸಂಗೀತವನ್ನು ಕೇಳಿಸಬೇಕು. ಹೊಸ ಸಂಗೀತ ಎಂದನಿಸಬಾರದು. ತಾರಾಗಣ ಇನ್ನೂ ಪೂರ್ತಿಯಾಗಿಲ್ಲ. ಜರೀನಾ ವಹಾಬ್​ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 1878ರಿಂದ 1949ರ ಕಾಲಘಟ್ಟದಲ್ಲಿ ಈ ಚಿತ್ರ ನಡೆಯುತ್ತದೆ. ಬೆಂಗಳೂರು, ಮುಂಬೈ, ಉತ್ತರ ಪ್ರದೇಶದಲ್ಲಿ 50 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಕನ್ನಡ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿ, ತೆಲುಗು ಮತ್ತು ತಮಿಳಿಗೆ ಡಬ್ಬಿಂಗ್​ ಆಗಲಿದೆ. ಸರೋಜಿನಿ ನಾಯ್ಡು ಅವರ ಕುಟುಂಬದ ಎನ್​ ಓ ಸಿ ಸಿಕ್ಕಿದೆ. ಗೋಪಾಲಕೃಷ್ಣ ಗೋಖಲೆ ಅವರ ಪಾತ್ರವನ್ನು ರಂಗಾಯಣ ರಘು ಅವರಿಂದ ಮಾಡಿಸಬೇಕೆಂಬ ಆಸೆ ಇದೆ. ಜೂನ್​ ಮೊದಲ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ವಿನಯ್ ಚಂದ್ರ ಚಿತ್ರದ ಬಗ್ಗೆ ವಿವರಣೆ ನೀಡಿದರು.

Must Read

spot_img

Deprecated: preg_replace(): Passing null to parameter #3 ($subject) of type array|string is deprecated in /home/u452565381/domains/kannadabeatz.com/public_html/wp-includes/kses.php on line 1805

Deprecated: preg_replace(): Passing null to parameter #3 ($subject) of type array|string is deprecated in /home/u452565381/domains/kannadabeatz.com/public_html/wp-includes/kses.php on line 1805
Share via
Copy link
Powered by Social Snap