ಸಂದೀಪ್ ಕಿಶನ್ ಮತ್ತು ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ “ಮೈಕಲ್”.
ಜನವರಿ 16 ವಿಜಯ್ ಸೇತುಪತಿ ಅವರ ಹುಟ್ಟುಹಬ್ಬ. ಅದರ ಸವಿನೆನಪಿಗಾಗಿ
“ಮೈಕಲ್” ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ, ವಿಜಯ್ ಸೇತುಪತಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ಶ್ರೀ ವೆಂಕಟೇಶ್ವರ ಸಿನಿಮಾಸ್ ಮತ್ತು ಕರಣ್ ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.
ಈಗಾಗಲೇ ಹಲವು ಸಿನಿಮಾ ನಿರ್ಮಾಣ ಮಾಡಿರುವ ಶ್ರೀ ವೆಂಕಟೇಶ್ವರ ಸಿನಿಮಾಸ್ ಮೂಲಕ ಈ ಮಾಸ್ ಸಿನಿಮಾ ನಿರ್ಮಾಣವಾಗುತ್ತಿದೆ.
ರಂಜಿತ್ ಜೆಯಕೊಡಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಚಿತ್ರ ಮೂಡಿಬರಲಿದೆ.
ನಾರಾಯಣ್ ದಾಸ್ ಕೆ ನಾರಂಗ್ ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ಭರತ್ ಚೌಧರಿ, ಪುಷ್ಕರ್ ರಾಮ್ ಹಾಗೂ ಮೋಹನ್ ರಾವ್ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ.