HomeNewsವಿಭಿನ್ನ ಕಥಾಹಂದರ ಹೊಂದಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ.

ವಿಭಿನ್ನ ಕಥಾಹಂದರ ಹೊಂದಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ.

“ರಂಗಿತರಂಗ”, ” ಅವನೇ ಶ್ರೀಮನ್ನಾರಾಯಣ” ಚಿತ್ರದಂತಹ ಉತ್ತಮ ಚಿತ್ರಗಳ ನಿರ್ಮಾಪಕರಾದ
ಹೆಚ್.ಕೆ.ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಆ ರೊಮ್ಯಾಂಟಿಕ್ ಹಾಡನ್ನು ಕಾಡಿನ ಸುಂದರ ಪರಿಸರದಲ್ಲಿ ನಡೆಸುವ ಯೋಚನೆಯಿದೆ. ಕನ್ನಡದ ಸುಪ್ರಸಿದ್ಧ ನಟಿಯೊಬ್ಬರು ಈ ಹಾಡಿನಲ್ಲಿ ಕಾಣಿಸಿಕೊಳ್ಳಲಿದಾರಂತೆ.

ಹಾರಾರ್, ಕಾಮಿಡಿ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಭರತ್ ಜೆ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ಭರತ್ ಅವರೆ ಬರೆದಿದ್ದಾರೆ. ರೆಡಿಯೋ ಹಾಗೂ ಪ್ರಚಾರ ವಿಭಾಗದಲ್ಲಿ ಕೆಲಸ ಮಾಡಿರುವ ಅನುಭವವಿರುವ ಭರತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

“ಪ್ರೀಮಿಯರ್ ಪದ್ಮಿನಿ” ಖ್ಯಾತಿಯ ವಿವೇಕ್ ಸಿಂಹ “ಸ್ಪೂಕಿ ಕಾಲೇಜ್” ನ ನಾಯಕ. “ದಿಯಾ” ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ. ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಪಿ.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ “ಕಾಮಿಡಿ ಕಿಲಾಡಿಗಳು” ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕರ್ನಾಟಕದಾದ್ಯಂತ ಆಡಿಷನ್
ನಡೆಸುವ ಮೂಲಕ ಕೂಡ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಧಾರವಾಡದಲ್ಲಿರುವ 103 ವರ್ಷಗಳ ಹಿಂದಿನ ಬ್ರಿಟಿಷರ ಕಾಲದ ಕಾಲೇಜು ಈ ಚಿತ್ರದ ಕೇಂದ್ರ ಬಿಂದು. ಇಲ್ಲೇ ಬಹುತೇಕ ಚಿತ್ರೀಕರಣ ನಡೆದಿದೆ. ಕಾಳಿ ನದಿಯಿಂದ ಆವೃತವಾಗಿರುವ, ದಟ್ಟವಾದ ವನಸಿರಿಯನ್ನು ಹೊಂದಿರುವ ದಾಂಡೇಲಿಯಲ್ಲೂ ಚಿತ್ರೀಕರಣ ನಡೆಸಿರುವುದಾಗಿ ಚಿತ್ರತಂಡ ತಿಳಿಸಿದೆ.

ಹಾರಾರ್ ಚಿತ್ರಗಳು ಸಾಕಷ್ಟು ಬಂದಿದೆಯಾದರೂ, ಇದು ವಿಭಿನ್ನ ಎನ್ನುವ ನಿರ್ದೇಶಕ ಭರತ್, ನಮ್ಮ ಚಿತ್ರ ತಾಂತ್ರಿಕವಾಗಿ ಬಹಳ ಶ್ರೀಮಂತವಾಗಿರುತ್ತದೆ. ಇದು ಒಂಥರ “ಸ್ಪೂಕಿ” ಎಂದು ತಿಳಿಸಿದ್ದಾರೆ. ಮನೋಹರ್ ಜೋಶಿ ಅವರ ಮನಮೋಹಕ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಅವರ ಇಂಪಾದ ಸಂಗೀತ ಹಾಗೂ “ಕೆ.ಜಿ.ಎಫ್” ಖ್ಯಾತಿಯ ಶ್ರೀಕಾಂತ್ ಅವರ ಸಂಕಲನ “ಸ್ಪೂಕಿ ಕಾಲೇಜ್” ನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಚಿತ್ರದ ಪೋಸ್ಟರ್ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಕನ್ನಡ ಚಿತ್ರರಂಗದಲ್ಲಿ ಈವರೆಗೂ ಬಂದಿರುವ “ನಾ ನಿನ್ನ ಬಿಡಲಾರೆ”,
” ಶ್”, “ಆಪ್ತಮಿತ್ರ”, ” ರಂಗಿತರಂಗ” ದಂತಹ ಅದ್ಭುತ ಚಿತಗಳಷ್ಟೇ ನಮ್ಮ ಚಿತ್ರವೂ “ಸ್ಪೂಕಿ” ಯಾಗಿರುತ್ತದೆ ಎನ್ನುತ್ತಾರೆ ನಿರ್ದೇಶಕರು. ಯಾರು ಊಹಿಸಲಾಗದ ಕ್ಲೈಮ್ಯಾಕ್ಸ್ ಸಹ “ಸ್ಪೂಕಿ ಕಾಲೇಜ್” ನಲ್ಲಿರುತ್ತದಂತೆ.

ಸಾಮಾನ್ಯವಾಗಿ ಎಲ್ಲಾ ಕಾಲೇಜಿನಲ್ಲಿ ಲವ್ ಸ್ಟೋರಿ ನೋಡಬಹುದು. ಆದರೆ ದೆವ್ವದ ಸ್ಟೋರಿ ನೋಡಬೇಕಾದರೆ “ಸ್ಪೂಕಿ ಕಾಲೇಜ್” ಗೆ ಬರಬೇಕು.

Must Read

spot_img

Deprecated: preg_replace(): Passing null to parameter #3 ($subject) of type array|string is deprecated in /home/u452565381/domains/kannadabeatz.com/public_html/wp-includes/kses.php on line 1745

Deprecated: preg_replace(): Passing null to parameter #3 ($subject) of type array|string is deprecated in /home/u452565381/domains/kannadabeatz.com/public_html/wp-includes/kses.php on line 1745
Share via
Copy link
Powered by Social Snap