….
ಶಾಂತಾ ಸಿನಿಮಾಸ್ ನಡಿ ಎಸ್ ಕೆ ರಾಮಕೃಷ್ಣ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ಅನಾವರಣಗೊಂಡಿದೆ. ಒಂದಷ್ಟು ಹೊಸಬರೇ ಸೇರಿ ಮಾಡ್ತಿರುವ ಈ ಸಿನಿಮಾಗೆ ಧರ್ಮಂ ಎಂಬ ಪವರ್ ಫುಲ್ ಟೈಟಲ್ ಇಡಲಾಗಿದ್ದು, ಇತ್ತೀಚೆಗೆಷ್ಟೇ ಈ ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಸರಳವಾಗಿ ನೆರವೇರಿದೆ. ಕನ್ನಡದ ಚಿತ್ರರಂಗದ ಸ್ಫೂರ್ತಿಯ ಚಿಲುವೆಗಳಾಗಿರುವ ಶಂಕರ್ ನಾಗ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಈ ಶೀರ್ಷಿಕೆಯನ್ನು ಚಿತ್ರತಂಡ ಅರ್ಪಣೆ ಮಾಡಿದೆ.
ಕಳೆದ ಹದಿಮೂರು ವರ್ಷಗಳಿಂದ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ನಾಗಮುಖ ಧರ್ಮಂ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು, ಇದು ಇವರು ನಿರ್ದೇಶನದ ಮೊದಲ ಸಿನಿಮಾವಾಗಿದೆ. 1980ರ ಕಾಲಘಟ್ಟದಲ್ಲಿ ನಡೆದ ಸತ್ಯ ಘಟನೆ ಆಧಾರಿತ ಧರ್ಮಂ ಸಿನಿಮಾದಲ್ಲಿ ಶಶಿ ನಾಯಕ ನಟನಾಗಿ ಅಭಿನಯಿಸಿದ್ದು, ವರಿಣಿಕಾ ಶೆಟ್ಟಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಸರವಣ ಸಂಗೀತ, ವಿನೋದ್ ಕುಮಾರ್ ಸಂಕಲನ, ನಾಗಶಟ್ಟಿ ಕ್ಯಾಮೆರಾ ಕೈಚಳಕ ಸಿನಿಮಾದಲ್ಲಿರಲಿದೆ.
ಆನೇಕಲ್ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಈಗಾಗಲೇ 90ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸಾಂಗ್ ಹಾಗೂ ಫೈಟ್ ಸೀನ್ಸ್ ಶೂಟಿಂಗ್ ನ್ನು ಬಾಕಿ ಉಳಿಸಿಕೊಂಡಿದೆ. ಸದ್ಯಕ್ಕೆ ಟಾಕಿ ಪೋಷನ್ ನಲ್ಲಿ ಬ್ಯುಸಿಯಾಗಿರುವ ಧರ್ಮಂ ಟೀಂ ಕೊರೋನಾ ಆರ್ಭಟ ಕೊಂಚ ಕಡಿಮೆಯಾದ್ಮೇಲೆ ತೆರೆಗೆ ಬರುವ ಯೋಜನೆ ಹಾಕಿಕೊಂಡಿದೆ.