.
ಹೊಸ ಹುಡುಗಿ ಅದ್ವಿಕ ” ಕಿರಿಕ್ ಶಂಕರ್ “ನ ನಾಯಕಿ.
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿರುವ ” ಕಿರಿಕ್ ಶಂಕರ್ ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನೂತನ ಪ್ರತಿಭೆ ಅದ್ವಿಕ ಈ ಚಿತ್ರದ ನಾಯಕಿಯಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ.
ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಎಂ.ಎನ್.ಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದು, ಆರ್ ಅನಂತರಾಜು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.
ತುಂಬಾ ದಿನಗಳ ನಂತರ ನಮ್ಮ ಭೇಟಿಯಾಗುತ್ತಿದೆ. ಕೊರೋನ ಕಾರ್ಮೋಡ ಕಳೆದು ಸಂಭ್ರಮದ ವಾತಾವರಣ ಮರಳಿ
ಬಂದಿದೆ. ಇದೇ ಏಪ್ರಿಲ್ ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಧನ್ಯವಾದ ಎಂದರು ಎಂ.ಎನ್.ಕುಮಾರ್.
ಇದೊಂದು ನಗರದ ಹೊರವಲಯದಲ್ಲಿ ನಡೆಯುವ ಕಥೆ. ನಾಯಕನಿಗೆ ಇಬ್ಬರು ತಂಗಿಯರು. ತುಂಬು ಕುಟುಂಬ. ಸಂಸಾರದ ಜವಾಬ್ದಾರಿ ಹೆಗಲ ಮೇಲಿದ್ದರೂ, ಯಾವುದಕ್ಕೂ ತಲೆ ಕೆಡಸಿಕೊಳ್ಳದಾತ. ಆತನ ಜೀವನದಲ್ಲಿ ನಾಯಕಿಯ ಆಗಮನವಾಗುತ್ತಿದಂತೆ ಏನೆಲ್ಲಾ ಆಗುತ್ತದೆ ಎಂಬುದೆ ಕಥಾಸಾರಾಂಶ. ಕಥೆ ಎಲ್ಲರಿಗೂ ಹಿಡಿಸಿದರೆ ಆ ಕ್ರೆಡಿಟ್ ಯೋಗೀಶ್ ಹುಣಸೂರು ಅವರಿಗೆ ಹೋಗಬೇಕು. ಅವರೆ ಈ ಚಿತ್ರದ ಕಥೆಗಾರರು. ತಾಂತ್ರಿಕವರ್ಗದವರ ಹಾಗೂ ಕಲಾವಿದರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಿಮ್ಮ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ದೇಶಕ ಅನಂತರಾಜು.
ಇದೊಂದು ಪಕ್ಕಾ ಕಮರ್ಷಿಯಲ್ ಚಿತ್ರ. ಅವಕಾಶ ನೀಡಿದ ಎಂ.ಎನ್ ಕುಮಾರ್ ಅವರಿಗೆ ಧನ್ಯವಾದ. ಅನಂತರಾಜು ಅವರ ಜೊತೆ ಕೆಲಸ ಮಾಡಿದ್ದು ಸಂತಸ ತಂದಿದೆ. ಪ್ರತಿಯೊಂದು ಸಿನಿಮಾದಲ್ಲೂ ಕಲಿಯುವುದು ಇರತ್ತೆ. ಈ ಚಿತ್ರದಲ್ಲೂ ಸಾಕಷ್ಟು ಕಲಿತ್ತಿದ್ದೇನೆ. ನನ್ನ ಜೊತೆ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಲೂಸ್ ಮಾದ ಯೋಗಿ..
ನಾನು ರಂಗಭೂಮಿ ಕಲಾವಿದೆ ನಿರ್ದೇಶಕ ಗಿರಿರಾಜ್ ಅವರು ನನ್ನ ಗುರುಗಳು. ಅವರ ಸಾಕಷ್ಟು ನಾಟಕಗಳಲ್ಲಿ ನಟಿಸಿದ್ದೇನೆ. ಹಿರಿತೆರೆಯಲ್ಲಿ ಇದು ನನ್ನ ಮೊದಲ ಚಿತ್ರ. ಪಾತ್ರ ತುಂಬಾ ಚೆನ್ನಾಗಿದೆ. ಅವಕಾಶ ಕೊಟ್ಟ ನಿರ್ಮಾಪಕ, ನಿರ್ದೇಶಕರಿಗೆ ವಂದನೆಗಳನ್ನು ಸಲ್ಲಿಸಿದರು ನಾಯಕಿ ಅದ್ವಿಕ.
ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ವೀರ ಸಮರ್ಥ್ ಮಾತನಾಡಿದರು.
ಅದ್ವಿಕರಿಗೆ ಅಭಿನಯ ತರಭೇತಿ ನೀಡಿದ ನಿರ್ದೇಶಕ ಗಿರಿರಾಜ್ ಅತಿಥಿಯಾಗಿ ಆಗಮಿಸಿ ಶುಭಕೋರಿದರು. ಕಥೆ, ಚಿತ್ರಕಥೆ, ಸಂಭಾಷಣೆ ಬರೆದರುವ ಯೋಗೀಶ್ ಹುಣಸೂರು ಹಾಗೂ
ಅಭಿನಯಿಸಿರುವ ರಿತೇಶ್ ಅನುಭವದ ಮಾತುಗಳಾಡಿದರು. ಆನಂದ್ ಆಡಿಯೋ ಶ್ಯಾಮ್ ಹಾಗೂ ಗೀತರಚನೆಕಾರ ಕಿನ್ನಾಳ್ ರಾಜ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.