HomeNewsಅಪ್ಪು ಸಮಾಧಿಯ ಮುಂದೆ "ಬನಾರಸ್" ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ.

ಅಪ್ಪು ಸಮಾಧಿಯ ಮುಂದೆ “ಬನಾರಸ್” ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ.

ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ – ಸೋನಾಲ್ ಮಾಂಟೆರೊ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ “ಬನಾರಸ್”.
ಈ ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿಯ ಮುಂದೆ ಬಿಡುಗಡೆ ಮಾಡಲಾಯಿತು. ಇದಕ್ಕೂ ಮುನ್ನ ಚಿತ್ರತಂಡ ಡಾ|ರಾಜಕುಮಾರ್, ಪಾರ್ವತಮ್ಮ ರಾಜ್‍ಕುಮಾರ್, ಅಂಬರೀಶ್ ಹಾಗೂ ಪುನೀತ್ ರಾಜ್‍ಕುಮಾರ್ ಅವರ‌ ಸಮಾಧಿಗಳಿಗೆ ಪೂಜೆ ಸಲ್ಲಿಸಿದ್ದರು.
ಕಂಠೀರವ ಸ್ಟುಡಿಯೋದಿಂದ, ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಗೂ ಪೂಜೆ ಸಲ್ಲಿಸಿ, ಲಕ್ಷ್ಮೀ ಪೂಜೆ ಮಾಡಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಸಂಸ್ಥೆಯ ಕಡೆಯಿಂದ ಅದ್ದೂರಿಯಾಗಿ ನಿರ್ಮಾಣಗೊಂಡಿರುವ ಈ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಫಸ್ಟ್ ಲುಕ್ ಗೆ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗಿದೆ.

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ, ಯಾರೂ ನಿರೀಕ್ಷಿಸದಂಥಾ ದುರಂತ ಘಟಿಸದಿದ್ದರೆ ಈ ದಿನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರೇ ಖುದ್ದಾಗಿ ಬನಾರಸ್‌ನ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್ಕನ್ನು ಬಿಡುಗಡೆಗೊಳಿಸ ಬೇಕಿತ್ತು.. ದುರಾದೃಷ್ಟವಶಾತ್ ಅವರು ಮರೆಯಾಗಿದ್ದಾರೆ. ಅವರು ತೋರಿದ ಪ್ರೀತಿಯನ್ನು ಮನಸಲ್ಲಿಟ್ಟುಕೊಂಡು ಅವರ ಪುಣ್ಯಭೂಮಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಗಿದೆ. ಅಲ್ಲಿಂದಲೇ ಅಪ್ಪು ಖುಷಿಗೊಳ್ಳುತ್ತಾರೆ, ಹರಸುತ್ತಾರೆಂಬ ತುಂಬು ನಂಬಿಕೆ ಚಿತ್ರ ತಂಡಕ್ಕಿದೆ. ಈ ಪೂಜೆ ಮತ್ತು ಫಸ್ಟ್ ಲುಕ್ ಬಿಡುಗಡೆಯ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕರು, ನಿರ್ದೇಶಕ ಜಯತೀರ್ಥ, ನಾಯಕ ನಾಯಕಿಯರಾದ ಝೈದ್ ಖಾನ್, ಸೋನಲ್ ಮಾಂಟೆರೊ, ಖ್ಯಾತ ಹಾಸ್ಯ ನಟ ಸುಜಯ್ ಮುಂತಾದವರು ಉಪಸ್ಥಿತರಿದ್ದರು.

ಇಡೀ ಚಿತ್ರ ಮೂಡಿ ಬಂದಿರುವ ಅದ್ಧೂರಿತನ ಮತ್ತು ವಿಭಿನ್ನ ಕಥಾನಕದ ಸುಳಿವನ್ನು ಈ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್ ನೀಡಲಿದೆ.

ಹಲವಾರು ಅದ್ಭುತಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ಈ ಚಿತ್ರದ ೯೦ ಭಾಗದ ಚಿತ್ರೀಕರಣವನ್ನು ಬನಾರಸ್‌ನ ಮನಮೋಹಕ ಪರಿಸರದಲ್ಲಿ ನಡೆಸಲಾಗಿದೆ. ಇಲ್ಲಿನ ೮೪ ಘಾಟ್ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿರುವುದು ಬನಾರಸ್‌ನ ಮತ್ತೊಂದು ಪ್ರಧಾನ ಅಂಶ.
ಇದೊಂದು ಪ್ಯಾನ್ ಇಂಡಿಯಾ ಸಿನಿಮಾ. ಏಕಕಾಲದಲ್ಲಿಯೇ ಐದು ಭಾಷೆಗಳಲ್ಲಿ ತಯಾರಾಗಿರುವ ಬನಾರಸ್, ದೇಶವ್ಯಾಪಿ ಸದ್ದು ಮಾಡಲಿದೆ.
ಈಗಾಗಲೇ ಈ ಚಿತ್ರದ ಬಗ್ಗೆ ಒಳ್ಳೆ ಅಭಿಪ್ರಾಯಗಳೂ ಕೂಡಾ ದೇಶವ್ಯಾಪಿ ಹಬ್ಬಿಕೊಂಡಿದೆ. ಅದೆಲ್ಲಕ್ಕೂ ಕಳಶವಿಟ್ಟಂತೆ ಈಗ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನಾವರಣಗೊಂಡಿದೆ. ಇದಕ್ಕೆ ಸಿಗುತ್ತಿರುವ ಭರಪೂರ ಪ್ರತಿಕ್ರಿಯೆ ಚಿತ್ರತಂಡದಲ್ಲಿ ಹೊಸಾ ಹುರುಪು ಮೂಡಿಸಿದೆ.
ಹೊಸಾ ಪ್ರತಿಭೆಯ ಆಗಮನಕ್ಕೆ ಮತ್ತು ಹೊಸತನದ ಪ್ರಯತ್ನಕ್ಕೆ ನಿಮ್ಮ ಬೆಂಬಲ ಸದಾ ಕಾಲವೂ ಇರಲಿ ಎನ್ನುವುದು ಚಿತ್ರತಂಡದ ಮನವಿ.

Must Read

spot_img
Share via
Copy link
Powered by Social Snap