Kannada Beatz
News

ಸದ್ಯದಲ್ಲೇ ಬರಲಿದೆ ಪ್ರಥಮ್ ಅಭಿನಯದ “ನಟ ಭಯಂಕರ” ಚಿತ್ರದ ಥ್ರಿಲ್ಲಿಂಗ್ ಟ್ರೇಲರ್..

ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ನಟ ಭಯಂಕರ” ಚಿತ್ರದ ಥ್ರಿಲ್ಲಿಂಗ್ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾರಾರ್, ಕಾಮಿಡಿ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರ ಪ್ರಥಮ್ ಅವರ ಅಭಿಮಾನಿ‌ಗಳಿಗಿದೆ.

ಸ್ವಾರಸ್ಯ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ‌ ಚಿತ್ರ ಜನವರಿ ಕೊನೆ ಅಥವಾ ಫೆಬ್ರವರಿ ಮೊದಲವಾರದಲ್ಲಿ ತೆರೆಗೆ ಬರಲಿದೆ. ಹೆಚ್ ಪಿ ನಿತೇಶ್ ಈ ಚಿತ್ರದ ಸಹ ನಿರ್ಮಾಪಕರು.

ಉದಯ್ ಕೆ ಮೆಹ್ತಾ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಪ್ರಥಮ್ ಬರೆದಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಒಂದು ಹಾಡನ್ನು ಹಾಡಿದ್ದಾರೆ. ಧ್ರುವ ಸರ್ಜಾರ ಧ್ವನಿ ಚಿತ್ರದುದ್ದಕ್ಕೂ ಕೇಳಿಸಲಿದೆ.
ಡಾ||ವಿ.ನಾಗೇಂದ್ರ ಪ್ರಸಾದ್, ನಾಗತಿಹಳ್ಳಿ ಚಂದ್ರಶೇಖರ್, ಬಹದ್ದೂರ್ ಚೇತನ್ ಹಾಗೂ ಅರಸು ಅಂತಾರೆ ಹಾಡುಗಳನ್ನು ರಚಿಸಿದ್ದಾರೆ.

ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಈಗ ಡಿಐ ನಡೆಯುತ್ತಿದೆ.‌

ಪ್ರಥಮ್ ಅವರೊಂದಿಗೆ ಹಿರಿಯ ನಟ ಸಾಯಿಕುಮಾರ್ ಸಹ ನಟಿಸಿದ್ದಾರೆ. ಡಕೋಟ ಎಕ್ಸ್‌ಪ್ರೆಸ್ ನ ನಂತರ ಓಂಪ್ರಕಾಶ್ ರಾವ್ ನಟಿಸಿರುವ ಕಾಮಿಡಿ ಚಿತ್ರವಿದು. ನಿಹಾರಿಕಾ ಶೆಣೈ, ಸುಶ್ಮಿತ ಜೋಶಿ, ಶೋಭ್ ರಾಜ್, ಕುರಿ ಪ್ರತಾಪ್, ಚಂದನ ರಾಘವೇಂದ್ರ, ಶಂಕರ್ ಅಶ್ವತ್ಥ್, ಮೋಹನ್ ಜುನೇಜ, ರಮ, ಬಿರಾದಾರ್, ಎಂ.ಎಸ್ ಉಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ “ಬಘೀರ” ಆರಂಭ.

Kannada Beatz

ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಪ್ರವೀಣ್ ತೇಜ್: ‘ಜಿಗರ್’ ಟೀಸರ್ ಔಟ್

Kannada Beatz

ಹೈದರಾಬಾದ್ ನಲ್ಲಿ
ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರಕ್ಕೆ ಭರ್ಜರಿ ಫೈಟ್.

Kannada Beatz

Leave a Comment

Share via
Copy link
Powered by Social Snap