Kannada Beatz
News

ಮಾತಿನಮನೆಯಲ್ಲಿ “ಲಂಕಾಸುರ”.

ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, ” ಲಂಕಾಸುರ” ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ ಬಾಕಿಯಿದೆ. ಈ ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರಂತೆ.

ಈ ಹಿಂದೆ “ಮೂರ್ಕಲ್ ಎಸ್ಟೇಟ್” ಎಂಬ ಚಿತ್ರ ನಿರ್ದೇಶಿಸಿದ್ದ ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು.

ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದೆ. ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಈ ಚಿತ್ರದ ಸಾಹಸ ನಿರ್ದೇಶಕರು.

ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ ವಿನೋದ್ ಪ್ರಭಾಕರ್ ಅವರೊಂದಿಗೆ ನಟಿಸಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ಮನೋಜವಂ ಆತ್ರೇಯ ಸಾರಥ್ಯದಲ್ಲಿ “ಮೈ ನೇಮ್ ಇಸ್ ರಾಜ್” ಅದ್ದೂರಿ ಸಂಗೀತ ಕಾರ್ಯಕ್ರಮ.

Kannada Beatz

ರಿಷಿ ಅಭಿನಯದ ಮುಂದಿನ‌ ಸಿನಿಮಾ ಮಂಗಳಾಪುರಂ

Kannada Beatz

ಸ್ವಾತಂತ್ರ್ಯ ದಿನಕ್ಕೆ ಜಾನಕಿ vs ಸ್ಟೇಟ್ ಆಫ್ ಕೇರಳ’ ಚಿತ್ರ ಸ್ಟ್ರೀಮಿಂಗ್

Kannada Beatz

Leave a Comment

Share via
Copy link
Powered by Social Snap