Kannada Beatz
News

‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ ಬಿಡುಗಡೆ ಮಾಡಿದರು.

ಬೆಂಗಳೂರಿನ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ ಅವರ

ಈ ವೇಳೆ ಮಾತನಾಡಿದ ಅವರು,
ಬಾಲ್ಯದಲ್ಲಿ ನಮಗೆ ೩೦-೪೦ ಪುಟಗಳ ಸಣ್ಣ ಸಣ್ಣ ಕೈಪಿಡಿಗಳು ಸಿಗುತ್ತಿದ್ದವು. ಮನೆಗೆ ನೆಂಟರು ಬರುವಾಗ ವಿವೇಕಾನಂದ, ಪರಮಹಂಸರ ಕುರಿತ ಕೈಪಿಡಿಗಳನ್ನು ತರುತ್ತಿದ್ದರು. ಆ ಕೈಪಿಡಿಗಳಿಂದ ನಮಗೆ ಧಾರ್ಮಿಕ, ದೇವರ ಬಗ್ಗೆ ಮಾರ್ಗದರ್ಶನ ಸಿಗುತ್ತಿತ್ತು. ರಮೇಶ್ ಅವರ ಕೃತಿ ಕೂಡ ಹೆಚ್ಚು-ಕಡಿಮೆ ಅದೇ ಮಾದರಿಯಲ್ಲಿದೆ. ನೈತಿಕತೆಯ ಬಗ್ಗೆ ಉಪಯುಕ್ತ ತಿಳವಳಿಕೆ ನೀಡುವ ಈ ಪುಸ್ತಕ ಬರೆಯುವ ಮೂಲಕ ರಮೇಶ್ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಮೇಶ್ ಅರವಿಂದ ಅವರು, ಘಟನೆ, ಸನ್ನಿವೇಶಗಳನ್ನು ನೋಡಿದಾಗ ಅದನ್ನು ತನ್ನ ಹತ್ತಿರದವರ ಜೊತೆ ತಕ್ಷಣವೇ ಹೇಳಿಕೊಳ್ಳಬೇಕು ಎಂದು ಅನಿಸುವುದು ಮಾನವನ ಸಹಜ ಗುಣ. ಮಾತು ಕರಗತವಾಗಿರದಿದ್ದ ಕಾಲಘಟ್ಟದಲ್ಲಿಯೂ ಸಂಜ್ಞೆಗಳ ಮೂಲಕ ತನ್ನವರಿಗೆ ಮಾಹಿತಿಯನ್ನು ಮನುಷ್ಯ ತಿಳಿಸುತ್ತಿದ್ದ. ನಡೆದ ಘಟನೆಯಲ್ಲಿ ತನ್ನ ಪಾತ್ರವಿರದಿದ್ದರೂ ಹೇಳುವ ಸಂದರ್ಭದಲ್ಲಿ ತನ್ನನ್ನು ಸೇರಿಸಿಕೊಂಡು ವಿವರಿಸುತ್ತಿದ್ದ. ಇಂತಹ ಮಾನವ ಸಹಜ ಗುಣದ ಮುಂದುವರಿದ ಭಾಗವೇ ಬರವಣಿಗೆ. ನಾನು ನನ್ನ ಜೀವನದ ಅನುಭವಗಳನ್ನು ಮಕ್ಕಳಿಗೂ ಅರ್ಥವಾಗುವ ರೀತಿಯಲ್ಲಿ ಈ ಕೃತಿಯಲ್ಲಿ ಬರೆಯಲು ಯತ್ನಿಸಿದ್ದೇನೆ ಎಂದರು.

ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್‌ರಾವ್ ಹತ್ವಾರ್ (ಜೋಗಿ) ಮಾತನಾಡಿ, ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ ೨೫ ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ.ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ. ಸದಾ ಅಧ್ಯಯನಶೀಲತೆ, ಹುಡುಕಾಟ, ಹೊಸತನದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅವರ ಈ ಗುಣ ಈ ಕೃತಿಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದರು.

ಝಿ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ವೇದಿಕೆಯಲ್ಲಿದ್ದರು. ಜಮೀಲ್ ಸಾವಣ್ಣ ಪ್ರಾಸ್ತಾವಿಕ ಮಾತು ಆಡಿದರು. ರಂಜನೀಕೀರ್ತಿ ನಿರೂಪಣೆ ಮಾಡಿದರು.

Related posts

ಫೆಬ್ರವರಿ 10ರಂದು ಬರಲಿದೆ “ಬೆಂಗಳೂರು 69” .

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

ಸನ್ಮಾನ್ಯ ಗೃಹ ಸಚಿವರಿಂದ “ಓಮಿನಿ” ಟ್ರೇಲರ್ ಬಿಡುಗಡೆ.

Kannada Beatz

Leave a Comment

Share via
Copy link
Powered by Social Snap