Kannada Beatz
News

“ಶಂಭೋ ಶಿವ ಶಂಕರ”ನಿಗೆ ಸೆನ್ಸಾರ್ ಮೆಚ್ಚುಗೆ.


.
ವರ್ತೂರು ಮಂಜು ನಿರ್ಮಾಣದ , ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಶಂಭೋ ಶಿವ ಶಂಕರ” ಚಿತ್ರವನ್ನು ಇತ್ತೀಚಿಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿದೆ. ಯಾವುದೇ ಕಟ್ ನೀಡದೆ ಯು/ಎ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ನವಂಬರ್ ಕೊನೆಯ ವೇಳೆಗೆ ಚಿತ್ರ ತೆರೆಗೆ ಬರಲಿದೆ.

‘ಶಂಭೋ ಶಿವ ಶಂಕರ’ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್’, ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. “ಓಟಿಟಿ ಬಿಗ್ ಬಾಸ್” ಖ್ಯಾತಿಯ ಕಿರಣ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮೂರು ಮನಮೋಹಕ ಹಾಡುಗಳಿದ್ದು ಹಿತನ್ ಹಾಸನ್ ಸಂಗೀತ ನೀಡಿದ್ದಾರೆ. ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ “ನಾಟಿ ಕೋಳಿ” ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸದ್ಯದಲ್ಲೇ ಇನ್ನೆರಡು ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ. ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ‘ಶಂಭೋ ಶಿವ ಶಂಕರ’ ಚಿತ್ರಕ್ಕಿದೆ.

ಬೆಂಗಳೂರಿನಲ್ಲೇ ಈ ಚಿತ್ರದ ಬಹುತೇಕ ಚಿತ್ರೀಕರಣವಾಗಿದೆ. ಹಾಡಿನ ಚಿತ್ರೀಕರಣ ಮಾತ್ರ ಭಾರತ-ಚೀನಾ ಗಡಿಯ ಲಾಹೌಲ್ ಸ್ಪಿಟಿ ಎಂಬ ಸ್ಥಳದಲ್ಲಿ ನಡೆದಿದೆ.

Related posts

ಕನ್ನಡ ಚಿತ್ರರಂಗಕ್ಕೆ ಹೊಸ ನಿರ್ಮಾಣ ಸಂಸ್ಥೆ ಎಂಟ್ರಿ..AVR ಎಂಟರ್ ಟೈನರ್ ಬ್ಯಾನರ್ ನಡಿ ಸಿಂಪಲ್ ಸುನಿ-ಕಾರ್ತಿಕ್ ಮಹೇಶ್ ಸಿನಿಮಾ ಘೋಷಣೆ

Kannada Beatz

‘ದೇವರು ರುಜು ಮಾಡಿದನು’ ಸಿನಿಮಾದ ಮುಹೂರ್ತ ಸಂಭ್ರಮ…ಯುವ ಪ್ರತಿಭೆಗಳ ಜೊತೆ ಸಿಂಪಲ್ ಸುನಿ ಹೊಸ ಪಯಣ

Kannada Beatz

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

Kannada Beatz

Leave a Comment

Share via
Copy link
Powered by Social Snap