Kannada Beatz
News

ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಪ್ರವೀಣ್ ತೇಜ್: ‘ಜಿಗರ್’ ಟೀಸರ್ ಔಟ್

ಜಿಗರ್: ಪ್ರವೀಣ್ ತೇಜ್ ನಟನೆಯ ಹೊಸ ಸಿನಿಮಾದ ಟೀಸರ್ ರಿಲೀಸ್

ಸಮುದ್ರ ತಟದ ರಕ್ತದ ಕಥೆ ‘ಜಿಗರ್’: ಮಾಸ್ ಅವತಾರದಲ್ಲಿ ಪ್ರವೀಣ್ ತೇಜ್

ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ಜಿಗರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ಆಕ್ಷನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಸಿನಿಮಾದ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಸಿನಿಮಾತಂಡ ಇದೀಗ ಟೀಸರ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

ಕರಾವಳಿ ಸುತ್ತ ಮುತ್ತ ಚಿತ್ರೀಕರಣಗೊಂಡಿರುವ ಜಿಗರ್ ಔಟ್ ಅಂಡ್ ಔಟ್ ಆಕ್ಷನ್ ಸಿನಿಮಾ. ರೊಮ್ಯಾಂಟಿಕ್ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಪ್ರವೀಣ್ ಜಿಗರ್ ನಲ್ಲಿ ಚಾಕು ಚುಚ್ಚಿ ರಕ್ತ ಹರಿಸಿದ್ದನ್ನು ನೋಡಿ ಪ್ರೇಕ್ಷಕರು ಅಚ್ಚರಿ ಪಟ್ಟಿದ್ದಾರೆ. ಅಂದಹಾಗೆ ಚಿತ್ರಕ್ಕೆ ಸೂರಿ ಕುಂದರ್ ಆಕ್ಷನ್ ಕಟ್ ಹೇಳಿದ್ದಾರೆ. ನಿರ್ದೇಶಕ ಸೂರಿ ಅವರಿಗೆ ಇದು ಮೊದಲ ಸಿನಿಮಾ.

ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ನಿರ್ದೇಶಕ ಸೂರಿ ಜಿಗರ್ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ನಿರ್ದೇಶಕ ಸೂರಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯು ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಗಿದ್ದು ಪೂಜಾ ವಸಂತ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ ,

ಇನ್ನೂ ಈ ಸಿನಿಮಾದಲ್ಲಿ ಪ್ರವೀಣ್‌ಗೆ ನಾಯಕಿಯಾಗಿ ವಿಜಯ್ ಶ್ರೀ ಕಾಣಿಸಿಕೊಂಡಿದ್ದಾರೆ. ವಿಜಯ್ ಶ್ರೀ ಅವರಿಗೂ ಇದು ಮೊದಲ ಸಿನಿಮಾವಾಗಿದೆ. ಚಿತ್ರಕ್ಕೆ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಮಲ್ಫೆ, ಮರುವಂತೆ, ಮಂಗಳೂರು ಸುತ್ತಮುತ್ತ ಜಿಗರ್ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಸಂಪೂರ್ಣ ಸಿನಿಮಾ ಕೂಡ ಇದೇ ಬ್ಯಾಕ್‌ಡ್ರಾಪ್‌ನಲ್ಲಿ ಇರಲಿದೆ.

ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂದು ಎದುರುನೋಡುತ್ತಿದ್ದಾರೆ. ಕೊನೆಯದಾಗಿ ಪ್ರವೀಣ್ ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಟೀಸರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿರುವ ಜಿಗರ್ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿಸಿದೆ.

Related posts

RGV ಶಿಷ್ಯನ ‘ಸ್ಟಾಕರ್’ ಸಿನಿಮಾಗೆ ಇವರೇ ನೋಡಿ‌ ಹೀರೋ ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿಯಲ್ಲಿ ಐದಾರು ವರ್ಷಗಳ‌ ಕಾಲ ಪಳಗಿರುವ ಅಪ್ಪಟ ಪ್ರತಿಭಾನ್ವಿತ ನಿರ್ದೇಶಕ ಕಿಶೋರ್ ಭಾರ್ಗವ್

Kannada Beatz

ತನುಷ್ ಶಿವಣ್ಣ ಈಗ “ನಟ್ವರ್ ಲಾಲ್”

Kannada Beatz

ಧ್ರುವ ಸರ್ಜಾ ಬಿಡುಗಡೆ ಮಾಡಿದರು ವಿಭಿನ್ನ ಕಥೆಯ “ಠಾಣೆ” ಚಿತ್ರದ ಪೋಸ್ಟರ್.

Kannada Beatz

Leave a Comment

Share via
Copy link
Powered by Social Snap