HomeNews"ಬಿಂಗೊ" ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ .

“ಬಿಂಗೊ” ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ .

ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಗಿಣಿ ದ್ವಿವೇದಿ ಹಾಗೂ ಆರ್ ಕೆ ಚಂದನ್ ಅಭಿನಯ‌ .

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಬಿಂಗೋ” ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಇಪ್ಪತ್ತಕ್ಕೂ ಅಧಿಕ ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಅರ್ ಕೆ ಚಂದನ್ (ನಾಯಕ) ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ. ಫೆಬ್ರವರಿಯಲ್ಲಿ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದ್ದು, ರಾಗಿಣಿ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಕಿರುತೆರೆ ಹಿನ್ನೆಲೆಯಿಂದ ಬಂದಿರುವ ಆರ್ ಕೆ ಚಂದನ್ ಈ ಚಿತ್ರದ ಮೂಲಕ ನಾಯಕನಾಗಿ ಹಿರಿತೆರೆ ಪ್ರವೇಶಿಸುತ್ತಿದ್ದಾರೆ. ರಕ್ಷ ನಿಂಬರ್ಗಿ ನಾಯಕಿ. ರಾಜೇಶ್ ನಟರಂಗ, ಮಜಾಟಾಕೀಸ್ ಪವನ್ ಅವರಂತಹ ಅನುಭವಿ ಕಲಾವಿದರು “ಬಿಂಗೋ” ಚಿತ್ರದಲ್ಲಿದ್ದಾರೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ತಿಳಿಸಿದ್ದಾರೆ.

ಹಿತನ್ ಹಾಸನ್ ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ ನಟರಾಜ್ ಮುದ್ದಾಲ್ “ಬಿಂಗೋ” ಚಿತ್ರದ ಛಾಯಾಗ್ರಹಕರಾಗಿದ್ದಾರೆ.

Must Read

spot_img
Share via
Copy link
Powered by Social Snap