Kannada Beatz

Category : News

News

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz
...
News

7 ದಿನದಲ್ಲಿ 67 ಕೋಟಿ ರೂ. ದಾಟಿದ ‘ಎ.ಆರ್.ಎಂ’; ಟೋವಿನೋ ಫಾನ್ಸ್ ಫುಲ್ ಖುಷ್

Kannada Beatz
‘A.R.M’ 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಳು ದಿನಗಳಲ್ಲಿ, ARM ಚಿತ್ರ ಪ್ರಪಂಚದಾದ್ಯಂತ 67 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಸೆಪ್ಟೆಂಬರ್ 20 ರಂದು ಟಿಕೆಟ್ ದರ...
News

ಮೋಷನ್ ಪೋಸ್ಟರ್ ನಲ್ಲಿ ‘ಜೀಬ್ರಾ’…ದೀಪಾವಳಿಗೆ ತೆರೆಗೆ ಬರ್ತಿದೆ ಡಾಲಿ ಧನಂಜಯ್-ಸತ್ಯ ದೇವ್ ಸಿನಿಮಾ

Kannada Beatz
ನಟರಾಕ್ಷಸ ಡಾಲಿ ಧನಂಜಯ್ ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ. ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ಸತ್ಯರಾಜ್,...
News

ARM ಸಿನಿಮಾ 50 ಕೋಟಿ ಕಲೆಕ್ಷನ್ ; ಪ್ಯಾನ್ ಇಂಡಿಯಾ ಸ್ಟಾರ್ ದ ಟೋವಿನೋ ಥಾಮಸ್!

Kannada Beatz
‘A.R.M’ 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೇವಲ ಐದು ದಿನಗಳಲ್ಲಿ, ARM ಪ್ರಪಂಚದಾದ್ಯಂತ 50 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ. ಎ.ಆರ್.ಎಂ ಮೂಲಕ ಟೊವಿನೋ ದೊಡ್ಡ...
News

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

Kannada Beatz
ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ 4 ದಿನಕ್ಕೆ 54 ಕೋಟಿ...
News

‘ದೂರದರ್ಶನ’ ನಿರ್ದೇಶಕರ ಹೊಸ ಸಾಹಸ…’ಪೀಟರ್’ಗೆ ಸಾಥ್ ಕೊಟ್ಟ ವಿಜಯ್ ಸೇತುಪತಿ-ಡಾಲಿ ಧನಂಜಯ್

Kannada Beatz
‘ಪೀಟರ್’ ಜೊತೆ ಬಂದ ಸುಕೇಶ್ ಶೆಟ್ಟಿ…ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ-ವಿಜಯ್ ಸೇತುಪತಿ ಸಾಥ್ ದೂರದರ್ಶನ ಸಿನಿಮಾ ಮೂಲಕ ಗಟ್ಟಿ ಕಥೆ ಹೇಳಿದ್ದ ನಿರ್ದೇಶಕ ಸುಕೇಶ್ ಶೆಟ್ಟಿ ಎರಡನೇ ಪ್ರಯತ್ನಗೆ ಸಜ್ಜಾಗಿದ್ದಾರೆ. ಈ ಬಾರಿ...
News

ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ARM’ ಸಿನಿಮಾ

Kannada Beatz
ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ ಎರಡು ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ...
News

ARM’ ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ

Kannada Beatz
ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ.ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌...
News

ಟೊ!ವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್

Kannada Beatz
ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ...
News

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ; ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ

Kannada Beatz
. ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌, ಅಭಿನಯದ “ಎಆರ್‌ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ.ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆಮೆಚ್ಚುಗೆ ವ್ಯಕ್ತಪಡಿಸಿದರು. ಟೊವಿನೋ...