ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಸ್ತೂರಿ ಮಹಲ್ ಚಿತ್ರದ ಡಿಜಿಟಲ್ ಹಕ್ಕು ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಬಿಡುಗಡೆಗೂ ಮುನ್ನ ಡಿಜಿಟಲ್ ಹಕ್ಕು ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿರುವುದಕ್ಕೆ ನಿರ್ಮಾಪಕರು ಸಂತಸಪಟ್ಟಿದ್ದಾರೆ.
ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರ ವೀಕ್ಷಿಸಿದ್ದು, ಮೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.
ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ “ಕಸ್ತೂರಿ ಮಹಲ್” ನ ಟೀಸರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಆ ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ
ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ . ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನ “ಕಸ್ತೂರಿ ಮಹಲ್” ಗಿದೆ.