ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇದೀಗ ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಮೊದಲ ಚಿತ್ರವಾದ ಅಮರ್ ನಲ್ಲಿ ಅಭಿನಯಿಸಲಿದ್ದಾರೆ. ಅಂಬರೀಷ್ ಅವರಿಗೆ ತಮ್ಮ ಮಗನನ್ನು ಹೀರೊ ಆಗಿ ಕನ್ನಡ ಚಿತ್ರರಂಗದಲ್ಲಿ ಲಾಂಚ್ ಮಾಡಿ ಆತನ ಸಿನಿಮಾವನ್ನು ನೋಡಬೇಕೆಂಬುದು ಅವರ ಆಸೆಯಾಗಿತ್ತು.
ಅಂಬರೀಶ್ ಅವರ ಆಸೆಯಂತೆ ಮಗ ಅಭಿಷೇಕ್ ಅವರು ಚಿತ್ರದಲ್ಲಿ ನಟಿಸಲು ಒಪ್ಪಿ ಅಮರ್ ಎಂಬ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾದರು. ಶೂಟಿಂಗ್ ಕೂಡ ಸ್ಟಾರ್ಟ್ ಆಗಿ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದು ಕೆಲವು ಹಂತದ ಚಿತ್ರೀಕರಣ ಉಳಿದಿರುವಾಗಲೇ ಅಂಬರೀಶ್ ಅವರು ವಿಧಿವಶರಾದರು. ಇನ್ನೇನು ಕೆಲವೇ ತಿಂಗಳುಗಳು ಕಳೆದಿದ್ದರೆ ಮಗ ಅಭಿಷೇಕ್ ಅಭಿನಯದ ಅಮರ್ ಚಿತ್ರವನ್ನು ಅಂಬರೀಶ್ ಅವರು ನೋಡಿ ಕಣ್ತುಂಬಿಕೊಳ್ಳಬಹುದಾಗಿತ್ತು.
ಆದರೆ ವಿಧಿಯ ಆಟವೇ ಬೇರೆ ಆಗಿತ್ತು ಆ ಒಂದು ಸೌಭಾಗ್ಯವನ್ನು ಅಂಬರೀಶ್ ಅವರಿಗೆ ಆ ವಿಧಿ ಕೊಡಲೇ ಇಲ್ಲ ದುರಾದೃಷ್ಟವಶಾತ್ ಅಂಬರೀಶ್ ಅವರನ್ನು ವಿಧಿ ಕರೆದುಕೊಂಡಿತು. ಇನ್ನು ನಾಗಶೇಖರ್ ನಿರ್ದೇಶನದ ಅಮರ್ ಚಿತ್ರದಲ್ಲಿ ಅಭಿಷೇಕ್ ಅವರು ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದರೆ ಇದೀಗ ಅಭಿಷೇಕ್ ಗೆ ಸಾಥ್ ನೀಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಹ ಒಂದು ಮುಖ್ಯ ಪಾತ್ರದಲ್ಲಿ ಅಮರ್ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು ದರ್ಶನ್ ಅವರು ಅಮರ್ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋವನ್ನು ಅಭಿಷೇಕ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ.
ಹೌದು ನಿನ್ನೆಯಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಮರ್ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದರ ಮೂಲಕ ತಾವು ಸಹ ಒಂದು ಮುಖ್ಯ ಪಾತ್ರದಲ್ಲಿ ಅಭಿನಯಿಸುವುದರ ಮೂಲಕ ಅಭಿಷೇಕ್ ಅಂಬರೀಶ್ ಅವರಿಗೆ ಸಾಥ್ ನೀಡಿದ್ದಾರೆ. ಅಂಬರೀಶ್ ಅವರ ಮೊದಲನೇ ಪುತ್ರ ಎಂದೇ ಹೇಳಲಾಗುತ್ತಿದ್ದ ದರ್ಶನ್ ಅವರು ಇದೀಗ ಅಂಬರೀಶ್ ಅವರ ಪುತ್ರ ಅಭಿಷೇಕ್ ಅವರ ಚಿತ್ರದಲ್ಲಿ ಅಭಿನಯಿಸುತ್ತಿದ್ದು ಅಣ್ಣ ತಮ್ಮ ಇಬ್ಬರೂ ಒಟ್ಟಿಗೆ ಅಭಿನಯಿಸುತ್ತಿದ್ದಾರೆ ಎಂದು ಸ್ಯಾಂಡಲ್ ವುಡ್ ಮಂದಿ ಖುಷಿ ಪಡುತ್ತಿದ್ದಾರೆ.
ಅಷ್ಟೇನೇ ಆಗಲಿ ಇದೀಗ ಅಮರ್ ಚಿತ್ರದಲ್ಲಿ ದರ್ಶನ್ ಅವರು ಅಭಿನಯಿಸುತ್ತಿರುವುದು ಚಿತ್ರಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ದರ್ಶನ್ ಅವರ ಅಭಿಮಾನಿಗಳು ಸಹ ಇದೀಗ ಅಮರ್ ಚಿತ್ರಕ್ಕೆ ಕಾತುರದಿಂದ ಕಾಯುತ್ತಿದ್ದಾರೆ. ಹಾಗೆಯೇ ಕನ್ನಡ ಸಿನಿರಸಿಕರ ಸಹ ದರ್ಶನ್ ಮತ್ತು ಅಂಬರೀಶ್ ಅವರ ಪುತ್ರ ಅಭಿಷೇಕ್ ಅವರನ್ನು ಒಟ್ಟಿಗೆ ತೆರೆಯ ಮೇಲೆ ನೋಡಲು ಕಾತುರರಾಗಿದ್ದಾರೆ.