HomeNewsಭಾರತ ದೇಶಾದ್ಯಂತ ಸಂಚಲನ ಮೂಡಿಸಿದೆ 'ಕಬ್ಜ' ಚಿತ್ರದ ಮೋಷನ್ ಪೋಸ್ಟರ್.

ಭಾರತ ದೇಶಾದ್ಯಂತ ಸಂಚಲನ ಮೂಡಿಸಿದೆ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್.ಉಪೇಂದ್ರ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಚಿತ್ರತಂಡ.

ದೀಪಾವಳಿಗೆ ಬರಲಿದೆ ಪ್ಯಾನ್ ಇಂಡಿಯಾ ಸಿನಿಮಾ ಟೀಸರ್.

ಆರ್ ಚಂದ್ರು ನಿರ್ದೇಶನದಲ್ಲಿ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ ಅಭಿನಯಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಮೋಷನ್ ಪೋಸ್ಟರ್ ಸೆಪ್ಟೆಂಬರ್ ೧೮ ರಂದು ಬಿಡುಗಡೆಯಾಗಿದೆ.
ಉಪೇಂದ್ರ ಹುಟ್ಟುಹಬ್ಬದ ಸವಿನೆನಪಿಗಾಗಿ ಈ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ.
ಮೋಷನ್ ಪೋಸ್ಟರ್ ನೋಡಿ ಉಪೇಂದ್ರ ಅಭಿಮಾನಿಗಳು ಸಂತಸಪಟ್ಟಿದ್ದಾರೆ.
ಈಗಾಗಲೇ ಅರವತ್ತು ಭಾಗದ ಚಿತ್ರೀಕರಣ ಮುಗಿದಿದ್ದು, ಇದೇ ತಿಂಗಳ ಕೊನೆಗೆ ಮಿನರ್ವ‌ಮಿಲ್ ನಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ಮತ್ತೊಂದು ಹಂತದ ಚಿತ್ರೀಕರಣ ನಡೆಯಲಿದೆ.ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’.

ಕರ್ನಾಟಕದಲ್ಲಷ್ಟೇ ಅಲ್ಲದೇ ಇಡೀ ಭಾರತ ದೇಶಾದ್ಯಂತ ಕಬ್ಬ ಚಿತ್ರ ಸದ್ದು ಮಾಡುತ್ತಿದೆ.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ.. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ.. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ವರಿದ್ದಾರೆ.

Must Read

spot_img
Share via
Copy link
Powered by Social Snap