ಈ ಹಿಂದೆ ‘ತಾರಕಾಸುರ’ ಚಿತ್ರದಲ್ಲಿ ನಟಿಸಿದ್ದ ರವಿ, ಇದೀಗ ‘ಕೈಲಾಸ’ ಎಂಬ ಚಿತ್ರದ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ನಾಗ್ ವೆಂಕಟ್ ನಿರ್ದೇಶನದ ‘ಕೈಲಾಸ’ ಚಿತ್ರಕ್ಕೆ ‘ಕಾಸಿದ್ರೆ’ ಎಂಬ ಅಡಿ ಬರಹವಿದೆ. ಈಗಾಗಲೇ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು,
ಈಗ ಹೊಸ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಲೇಖಕ್ ಎಂ ಸಿದ್ದಾರ್ಥ ಸಾಹಿತ್ಯ ಒದಗಿಸಿದ್ದಾರೆ. ಆಶಿಕ್ ಅರುಣ್ ಸಂಗೀತ ಸಂಯೋಜನೆಯೊಂದಿಗೆ ಈ ಟ್ರಾನ್ಸ್ ವೀಡಿಯೋ ಸಾಂಗ್ ಮೂಡಿ ಬಂದಿದೆ. ಇದರ ಮೂಲಕವೇ ನಾಯಕ ರವಿಯ ಪಾತ್ರ ಕೂಡಾ ಪ್ರೇಕ್ಷಕರ ಮುಂದೆ ಸುಳಿದಂತಾಗಿದೆ. ಇದು ಕ್ರೈಂ ಕಂ ಕಾಮಿಡಿ ಜಾನರಿಗೊಳಪಡುವ ಚಿತ್ರ.ವಾಗಿದ್ದು, ಇದೇ ತಿಂಗಳ 24ರಂದು ಟ್ರೈಲರ್ ಬಿಡುಗಡೆಗೊಳ್ಳಲಿದೆ. ಇಲ್ಲಿ ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ‘ಶಿವಾಜಿ ಸುರತ್ಕಲ್’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, , ವಿನೋದ್ ರಾಜೇಂದ್ರನ್ ಛಾಯಾಗ್ರಹಣವಿದೆ.