Kannada Beatz
News

ಡಾಲಿ ಧನಂಜಯ ಅಭಿನಯದ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಪೂರ್ಣ.

ಸೆಪ್ಟೆಂಬರ್ 9 ರಂದು ಅದ್ದೂರಿ ಬಿಡುಗಡೆ.

ಡಾಲಿ ಧನಂಜಯ ನಾಯಕರಾಗಿ ನಟಿಸಿರುವ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಕುದುರೆಮುಖ, ಗೋಕರ್ಣ, ಶಿವಮೊಗ್ಗದಲ್ಲಿ ಎಂಭತ್ತು ದಿನಗಳ ಚಿತ್ರೀಕರಣ ನಡೆದಿದೆ. ಮಾತಿನ ಜೋಡಣೆ ಸಹ ಅಂತಿಮ ಹಂತದಲ್ಲಿದೆ. ಸೆಪ್ಟೆಂಬರ್ 9 ರಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಇದು 90ರ ದಶಕದಲ್ಲಿ ನಡೆಯುವ ಕಥೆ. ಬಾರ್ ಸಪ್ಲೇಯರ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಡಾಲಿ ಅವರ ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದಿತಿ ಪ್ರಭುದೇವ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಬೆಳವಾಡಿ, ಭಾವನ ರಾಮಣ್ಣ, ಕಾಮಿಡಿ ಕಿಲಾಡಿಗಳು ಸಂತು, ತ್ರಿವೇಣಿ, ಪ್ರಾಣ್ಯ, ನಂದ ಗೋಪಾಲ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಕುಶಾಲ್ ಗೌಡ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ಕುಶಾಲ್ ಗೌಡ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಕಾರ್ತಿಕ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಕುಟುಂಬ ಸಮೇತ ನೋಡಬಹುದಾದ ಸುಂದರ ಕಥಾಹಂದರದ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.

Related posts

ಗಣೇಶ ಹಬ್ಬಕ್ಕೆ ಸ್ಯಾಂಡಲ್ ವುಡ್ ಗೆ ‘ಟಾಮಿ’ ಎಂಟ್ರಿ

Kannada Beatz

ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ARM’ ಸಿನಿಮಾ

Kannada Beatz

ದೇವಸಸ್ಯ ಚಿತ್ರೀಕರಣ ಮುಕ್ತಾಯ
  ಚಿತ್ರದಲ್ಲಿ ಸಿದ್ದಿ ಸಂಸ್ಕೃತಿಯ ಅನಾವರಣ

Kannada Beatz

Leave a Comment

Share via
Copy link
Powered by Social Snap