Kannada Beatz
News

ಜೋಗಿ ಪ್ರೇಮ್ ಬಿಡುಗಡೆ ಮಾಡಿದರು “ರಾಣ” ಚಿತ್ರದ “ಗಲ್ಲಿ ಬಾಯ್” ಹಾಡು.

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ “ರಾಣ” ಚಿತ್ರದ “ಗಲ್ಲಿ ಬಾಯ್” ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.

ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು.

ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ. ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕ ಶ್ರೇಯಸ್.

ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತಾಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು ನಾಯಕಿ ರೀಷ್ಮಾ ನಾಣಯ್ಯ.

ಗುಜ್ಜಲ್ ಪುರುಷೋತ್ತಮ್ ಅವರು ಒಂದು ಸಿನಿಮಾ ಮಾಡುತ್ತಿದ್ದೇನೆ. ನೀವು ಜೊತೆಗಿರಬೇಕು ಎಂದರು. ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ, ನಾನು ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ. “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ. ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11 ಚಿತ್ರ ತೆರೆಗೆ ಬರುತ್ತಿದೆ ಎಂದು ತಿಳಿಸಿದ ಕೆ.ಮಂಜು, ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಹೇಳಿದರು.

ಹಾಡು ಬಿಡುಗಡೆ ಮಾಡಿದ ಪ್ರೇಮ್ ಸರ್ ಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.‌ ನವೆಂಬರ್ 11 ಬಿಡುಗಡೆಯಾಗಲಿದೆ. ತಂಡದರೆಲ್ಲಾ ಸೇರಿ ಉತ್ತಮ ಚಿತ್ರ ಮಾಡಿದ್ದೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನಂದಕಿಶೋರ್.

ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್.

ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

ಚಿತ್ರದಲ್ಲಿ ಅಭಿನಯಿಸಿರುವ ಕೋಟೆ ಪ್ರಭಾಕರ್, ಅಶೋಕ್ , ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಚಿತ್ರದ ಕುರಿತು ಮಾತನಾಡಿದರು. ರೈತ ಕೇಶವ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related posts

ಸದ್ಯದಲ್ಲೇ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ” ಚಿತ್ರ ಬಿಡುಗಡೆ

Kannada Beatz

ಬಹುಭಾಷಾ ಚಿತ್ರ ಸರೋಜಿನಿಯಲ್ಲಿ ನಿಸರ್ಗ ಗೌಡ

Kannada Beatz

ಬೆಂಗಳೂರಿನಲ್ಲಿ ‘ಕಡುವ’ ಪ್ರೀ-ರಿಲೀಸ್ ಇವೆಂಟ್…ಜೂನ್ 30ಕ್ಕೆ ರಿಲೀಸ್ ಆಗ್ತಿದೆ ಪೃಥ್ವಿರಾಜ್ ಸುಕುಮಾರನ್ ನಟನೆಯ ಪ್ಯಾನ್ ಇಂಡಿಯಾ ಚಿತ್ರ ಕಡುವ

Kannada Beatz

Leave a Comment

Share via
Copy link
Powered by Social Snap