ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ “ಲಂಕೆ” ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ.
ಜುಲೈ 6ರಂದು ಲೂಸ್ ಮಾದ ಯೋಗಿ ಅವರ ಹುಟ್ಟುಹಬ್ಬ. ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ನಾಳೆ “ಲಂಕೆ” ಚಿತ್ರದ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.
ಸಾಹಸ ಪ್ರಧಾನ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರಾಮ್ ಪ್ರಾಸಾದ್ ಹಾಗೂ ಗುರುರಾಜ ದೇಸಾಯಿ ಸಂಭಾಷಣೆ ಬರೆದಿದ್ದಾರೆ.
ದಿ ಗ್ರೇಟ್ ಎಂಟರ್ ಟೈನರ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್(ನಾಗವಾರ) ಹಾಗೂ ಸುರೇಖ ರಾಮಪ್ರಸಾದ್ ಅವರು ನಿರ್ಮಿಸಿರುವ ಈ ಚಿತ್ರ ಲಾಕ್ ಡೌನ್ ಮುಗಿದು, ಚಿತ್ರಮಂದಿರ ಆರಂಭಕ್ಕೆ ಅನುಮತಿ ದೊರಕಿದ ಮೇಲೆ ತೆರೆಗೆ ಬರಲಿದೆ.
ಕಾರ್ತಿಕ್ ಶರ್ಮಾ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಹಾಗೂ ಎರಡು ಬಿಟ್ಸ್ ಗಳಿವೆ.
ರಮೇಶ್ ಬಾಬು ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ, ರವಿವರ್ಮ, ಪಳನಿರಾಜ್, ಅಶೋಕ್ ಸಾಹಸ ನಿರ್ದೇಶನ ಹಾಗೂ ಧನಂಜಯ್, ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಲೂಸ್ ಮಾದ ಯೋಗೇಶ್ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ಇತ್ತೀಚೆಗೆ ನಿಧನರಾದ ಸಂಚಾರಿ ವಿಜಯ್ ಸಹ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಕೃಷಿ ತಾಪಂಡ, ಕಾವ್ಯ ಶೆಟ್ಟಿ, ಶರತ್ ಲೋಹಿತಾಶ್ವ, ಶೋಭ್ ರಾಜ್, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್, ವಾಣಿಶ್ರೀ, ಗಾಯಿತ್ರಿ ಜಯರಾಂ, ಎಸ್ಟರ್ ನರೋನ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.