Kannada Beatz
News

ಬಹು ನಿರೀಕ್ಷಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಪೂರ್ಣ.

ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ
ನಡೆದಿದೆ.

ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಆ ಕಾಲಕ್ಕೆ ಸರಿಹೊಂದುವ ಅನೇಕ ಸೆಟ್ ಗಳನ್ನು ಹಾಕಲಾಗಿದೆ.

ಫಿಲಂ ಮೇಕಿಂಗ್ ನಲ್ಲಿ ಎಂ ಎಸ್ ಸಿ ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಪಡೆದಿದ್ದಾರೆ. ಅಷ್ಟೇ ಅಲ್ಲದೇ, ಶೂನ್ಯ ಫಿಲಂ ಮೇಕಿಂಗ್ ಕುರಿತು ಸಂಶೋಧನೆ ಕೂಡ ನಡೆಸಿದ್ದಾರೆ.

ಡಾಲಿ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಅದ್ಭುತ ಹಾಡುಗಳಿಗೆ ಚರಣ್ ರಾಜ್ ಸಂಗೀತ ನಿರ್ದೇಶನವಿದೆ. ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಕಲಾ ನಿರ್ದೇಶಕರು ಬಾಡಲ್ ನಂಜುಂಡಸ್ವಾಮಿ.

Related posts

ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಸುಪುತ್ರ…ಅಪ್ಪು ಆಶೀರ್ವಾದದೊಂದಿಗೆ ಕಿರೀಟಿ ಬಣ್ಣದ ಲೋಕಕ್ಕೆ ಪಾದಾರ್ಪಣೆ

Kannada Beatz

ಆರಕ್ಷಕರಿಗೆ ದೊಡ್ಡ “ಸೆಲ್ಯೂಟ್”

Kannada Beatz

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ‘ರಾಜ್ಯ ಯುವ ಘಟಕ’ದ ಅಧ್ಯಕ್ಷರಾಗಿ ಭರತ್ ಜಾಕ್ ಆಯ್ಕೆ

Kannada Beatz

Leave a Comment

Share via
Copy link
Powered by Social Snap