HomeNewsಕಾಡಿನ ಮೂಲ ನಿವಾಸಿಗಳ‌ಬದುಕು ತೆರೆದಿಡುವ 'ಅಡವಿ'

ಕಾಡಿನ ಮೂಲ ನಿವಾಸಿಗಳ‌
ಬದುಕು ತೆರೆದಿಡುವ ‘ಅಡವಿ’

ಕಬಾಲಿ ನಿರ್ದೇಶಕ ಪಾ.ರಂಜಿತ್
ಲಿರಿಕಲ್ ಸಾಂಗ್ ಬಿಡುಗಡೆ ಸಂವಿಧಾನ ಹಾಗೂ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವ, ಕಾಡಿನ ಸಂರಕ್ಷಣೆ,

ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷದ ಕಥೆಯನ್ನು ತೆರೆದಿಡುವ ಚಿತ್ರ ಅಡವಿ. ಈ ‌ಚಿತ್ರದ ಸಿಂಗಾರ ಸಿಂಗಾರ ತ್ವಾಟ ಹಾಡಿನ
ಲಿರಿಕಲ್ ವೀಡಿಯೋವನ್ನು ಕೆಜಿಎಫ್ ಮುನಿಸಿಪಲ್ ಗ್ರೌಂಡ್ ನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲ, ಕಬಾಲಿ, ತಂಗಲಾನ್ ಚಿತ್ರಗಳ ನಿರ್ದೇಶಕ ಪ.ರಂಜಿತ್ ಅವರು ಬಿಡುಗಡೆ ಮಾಡಿದರು. ಹಿರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಅವರ ಸಾಹಿತ್ಯದ 2500ನೇ ಗೀತೆ ಇದಾಗಿದ್ದು, ನವೀನ್ ಸಜ್ಜು ಈ ಹಾಡಿಗೆ ದನಿಯಾಗಿದ್ದಾರೆ. ಸಂವಿಧಾನ ಸಿನಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಟೈಗರ್ ನಾಗ್ ಅವರು ಚಿತ್ರಕಥೆ ಬರೆದ ನಿರ್ಮಿಸಿ, ನಿರ್ದೇಶಿಸಿರುವ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ.
ವೇದಿಕೆಯಲ್ಲಿ ಪಾ.ರಂಜೀತ್ ಮಾತನಾಡಿ ಅಡವಿ ಚಿತ್ರದಲ್ಲಿ ನೆಲದ ಮಣ್ಣಿನ ಮಕ್ಕಳ ಕಥೆಯೊಂದಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಅವರ ವಿಚಾರಗಳನ್ನು ಬಹಳ‌ ಚೆನ್ನಾಗಿ ತಂದಿದ್ದಾರೆ.‌ ನಿರ್ದೇಶಕ ಟೈಗರ್ ನಾಗ್ ಅವರು ಚಿತ್ರದ ಟೈಟಲ್ ಮತ್ತು ಹಾಡಿನಲ್ಲಿ ಕುತೂಹಲ ಮೂಡಿಸಿದ್ದಾರೆ, ಚಿತ್ರತಂಡಕ್ಕೆ ಯಶ ಸಿಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಸಂಪತ್ ಸುಬ್ಬಯ್ಯ, ಬೌದ್ಧ ಮಹಾಸಭಾದ ರಾಜ್ಯಾದ್ಯಕ್ಷ ಹ.ರ.ಮಹೇಶ್ ಬೌದ್ಧ, ಜೀವಾ ನವೀನ್, ಮೋಹನ್ ಮೌರ್ಯ, ಮಾಸ್ಟರ್ ಚಿರುಶ್ರೀನಾಗ್, ಶಿಲ್ಪ, ಆರುಂಧತಿ ಲಾಲ್, ಅರ್ಜುನ್ ಪಾಳ್ಳೇಗಾರ್, ಸಹನಿರ್ದೇಶಕ ಕೆ. ಮಂಜು ಕೋಟೆಕೆರೆ ಹಾಜರಿದ್ದರು.
ಚಿತ್ರರಂಗದಲ್ಲಿ ಸಾಕಷ್ಟು ಕುತೂಹಲ, ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಅಡವಿ ಚಿತ್ರದ ನಿರ್ಮಾಪಕ ಟೈಗರ್ ನಾಗ್ ಅವರು ಸೆನ್ಸಾರ್ ಮಂಡಳಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಸಿಬಿಐಗೆ ದೂರು ನೀಡಿದ್ದರು. ಬಳಿಕ ಸಿಬಿಐ ಬಲೆಗೆ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ಅರಣ್ಯವೇ ಸರ್ವಸ್ವ ಎಂದು ನಂಬಿರುವ ಕಾಡಿನ ಮೂಲ ನಿವಾಸಿಗಳ ಜೀವನ, ತಮ್ಮ ಸ್ವಚ್ಛಂದ ಬದುಕಿಗಾಗಿ ಅವರು ನಡೆಸುವ ಹೋರಾಟ, ಬುಡಕಟ್ಟು ಜನರು ಮತ್ತು ಪ್ರಸ್ತುತ ವ್ಯವಸ್ಥೆಯ ನಡುವಿನ ಸಂಘರ್ಷವನ್ನು ತೆರೆಯುವ ಪ್ರಯತ್ನ ಕಥೆಯಲ್ಲಿದೆ. ಈಗಾಗಲೇ ಅಡವಿ ಚಿತ್ರದ ಚಿತ್ರೀಕರಣ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಚಿತ್ರತಂಡವೀಗ ಬಿಡುಗಡೆಯ ಸಿದ್ಧತೆ ನಡೆಸಿದೆ.
ಅಡವಿ ಚಿತ್ರವನ್ನು ಐತಿಹಾಸಿಕ ಸಿದ್ದರಬೆಟ್ಟ, ಸಂಜೀವಿನಿ ಕ್ಷೇತ್ರ, ಸೂರ್ಯ ಗವಿ, ತಿಮ್ಮಲಾಪುರ ಅಭಯಾರಣ್ಯ, ಚಿಕ್ಕಮಗಳೂರು, ಸಕಲೇಶಪುರ, ತುಮಕೂರು ಮತ್ತು ಕೊರಟಗೆರೆ ಅಲ್ಲದೆ ಆದಿವಾಸಿಗಳು ವಾಸಿಸುವ ಗುಡಿಸಲುಗಳಲ್ಲಿ ಚಿತ್ರೀಕರಿಸಲಾಗಿದೆ.
ಅಡವಿ ಚಿತ್ರಕ್ಕೆ ಮಂಜು ಮಹಾದೇವ್ ಅವರ ಸಂಗೀತ ಸಂಯೋಜನೆ, ವಿಪಿನ್ ವಿ ರಾಜ್ ಅವರ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಕೆ ಮಂಜು ಕೋಟೆಕೆರೆ ಟೈಗರ್ ನಾಗ್ ಸಂಭಾಷಣೆ, ಕೆ.ಮಂಜು ಕೋಟೆಕೆರೆ, ನಿರ್ಮಾಣ ನಿರ್ವಹಣೆ ವಿಜಯಕುಮಾರ್ ಎವಿ, ಸಹ ನಿರ್ದೇಶನ, ಬಾಬು ಖಾನ್ ಕಲಾ ನಿರ್ದೇಶನವಿದೆ.
ರಾಮಾನಾಯಕ್, ಉಗ್ರಂ ದೇವು, ರವಿಕುಮಾರ್ ಸನ, ಅನಂತರಾಜು, ವಕೀಲ ಜಗದೀಶ್ ಮಹಾದೇವ್, ಹ.ರ.ಮಹೇಶ್, ವಾಲೆ ಚಂದ್ರಣ್ಣ, ಮಂಜೀವ, ವೃಶ್ಚಿಕ ಶಿಲ್ಪಾ, ಟೈಗರ್ ನಾಗ್, ಆನಂದ್, ಶಿವಾನಂದ್ , ನವೀನ್, ಅರುಣ್, ಸಿದ್ದರಾಜು, ಕೆ.ಆರ್. ಓಬಳರಾಜು, ಕುಣಿಗಲ್ ರಮೇಶ್, ಮಂಜುಳಾ ರಾಜಕುಮಾರ್, ನಾಗಮಣಿ, ಬೇಬಿ ಸಿಂಚನಾ ಪ್ರಮುಖ ಪಾತ್ರಗಳಲ್ಲಿದ್ದಾರೆ.

Must Read

spot_img
Share via
Copy link
Powered by Social Snap