ಕೆ.ಎಂ.ಚೈತನ್ಯ ನಿರ್ದೇಶನದ ಈ ಚಿತ್ರ ಜುಲೈ ಒಂದರಂದು ತೆರೆಗೆ.
“ಆ ದಿನಗಳು” ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ “ಅಬ್ಬಬ್ಬ” ಚಿತ್ರ ಇದೇ ಜುಲೈ 1 ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆನ್ ಆಗಸ್ಟೇನ್ ಸುಪ್ರಸಿದ್ದ ಮಲಯಾಳಂ ನಟಿ ಕೂಡ. ಸಾಕಷ್ಟು ಮಲೆಯಾಳಂ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಇವರಿಬ್ಬರ ನಿರ್ಮಾಣದಲ್ಲಿ ಮೂಡಿಬಂದಿರುವ ಮೊದಲ ಚಿತ್ರ “ಅಬ್ಬಬ್ಬ”.
“ಫ್ಯಾಮಿಲಿ ಪ್ಯಾಕ್” ಜೋಡಿ ಲಿಖಿತ್ ಶೆಟ್ಟಿ ಹಾಗೂ ಅಮೃತ ಅಯ್ಯಂಗಾರ್ ಈ ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಅಜಯ್ ರಾಜ್, ತಾಂಡವ್ ರಾಮ್, ಧನರಾಜ್ ಆಚಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಬೆಂಗಳೂರು ಹಾಗೂ ತುಮಕೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಇದೇ ಆರರಂದು ಟ್ರೇಲರ್ ಬಿಡುಗಡೆಯಾಗಲಿದೆ. ಜುಲೈ ಒಂದರಂದು ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಕೆ.ಎಂ.ಚೈತನ್ಯ ತಿಳಿಸಿದ್ದಾರೆ.
ಮನೋಹರ್ ಜೋಶಿ ಅವರ ಮನಮೋಹಕ ಛಾಯಾಗ್ರಹಣ
ವಿರುವ ಈ ಚಿತ್ರಕ್ಕೆ ದೀಪಕ್ ಅಲೆಕ್ಸಾಂಡರ್ ಅವರ ಸುಮಧುರ ಸಂಗೀತವಿದೆ. ಹರಿದಾಸ್ ಕೆ.ಜಿ.ಎಫ್ ಈ ಚಿತ್ರದ ಸಂಕಲನಕಾರರು. ಕಲಾ ನಿರ್ದೇಶಕರು ವಿಶ್ವಾಸ್ ಕಷ್ಯಪ್.
ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಈಗಾಗಲೇ ಅನೇಕ ಜಾಹೀರಾತುಗಳಿಗೆ ಸಂಗೀತ ಸಂಯೋಜಿಸಿರುವ ದೀಪಕ್ ಅಲೆಕ್ಸಾಂಡರ್ ಅವರಿಗೆ ಇದು ಸಂಗೀತ ನಿರ್ದೇಶಕರಾಗಿ ಚೊಚ್ಚಲ ಚಿತ್ರ.