Kannada Beatz
News

ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ರಿಲೀಸ್…ಈ ಹುಡುಗಿ ಎಷ್ಟು ಚೆಂದ ಎಂದಿದ್ಯಾರು?

ಸ್ಯಾಂಡಲ್ ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕಾದಂಬರಿ ಆಧಾರಿತ ಈ ಚಿತ್ರ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಇದೀಗ ಈ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ. ಕೆಂಡದ ಸೆರಗು’ ಚಿತ್ರವನ್ನು ನಿರ್ದೇಶಿಸಿರುವ ರಾಕಿ ಸೋಮ್ಲಿ ಈ ಹುಡುಗಿ ಎಷ್ಟು ಚೆಂದ ಹಾಡಿಗೆ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಕಂಠ ಕುಣಿಸಿದ್ದು, ವೀರೇಶ್ ಕಬ್ಲಿ ಟ್ಯೂನ್ ಹಾಕಿದ್ದಾರೆ. ಪಿ ಆರ್ ಒ ಕಂ ಯುವ ನಟ ಹರೀಶ್ ಅರಸು ಹಾಗೂ ಪೂರ್ಣಿಮಾ ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ.

ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣ ಹಚ್ಚಿದ್ದಾರೆ. ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ.

ಶ್ರೀ ಮುತ್ತು ಟಾಕೀಸ್ ಮತ್ತು ಎಸ್.ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ. ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ, ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

Related posts

ವಿಭಿನ್ನ ಕಥಾಹಂದರ ಹೊಂದಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ.

Kannada Beatz

ಮಂಗ್ಲಿ ಕಂಠಕ್ಕೆ ಹಾಡಿ ಕುಣಿದಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ

Kannada Beatz

ಪ್ರೇಕ್ಷಕರ ಮನಗೆಲ್ಲುವಲ್ಲಿ ‘ಖಾಸಗಿ ಪುಟಗಳು’ ಯಶಸ್ವಿ- ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಂದಲೂ ಮೆಚ್ಚುಗೆಯ ಮಹಾಪೂರ

Kannada Beatz

Leave a Comment

Share via
Copy link
Powered by Social Snap