HomeNewsವಿಜಯ ದಶಮಿಯಂದು ಆರಂಭವಾಯಿತು "ಕೈಮರ".

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”.

ಗೌತಮ್ ವಿಮಲ್ ನಿರ್ದೇಶನದ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಪ್ರಿಯಾಂಕ ಉಪೇಂದ್ರ, ಪ್ರಿಯಮಾಣಿ ಹಾಗೂ ಛಾಯಾಸಿಂಗ್ ನಟನೆ.

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ ” ಕೈಮರ” ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು.

ವಿಜಯ ದಶಮಿ ಶುಭದಿನದಂದು “ಕೈಮರ” ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ ಮಗ ಗೌತಮ್ ವಿಮಲ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮತ್ತಿಯಳಗನ್ ಅವರು ನಿರ್ಮಾಣದೊಂದಿಗೆ ನಟನೆಯನ್ನು ಮಾಡುತ್ತಿದ್ದಾರೆ. ನಾನು ಈ ಹಿಂದೆ ಸಾಕಷ್ಟು ಹಾರಾರ್ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. “ಕೈಮರ” ಚಿತ್ರದಲ್ಲಿ‌ ನಾನು ಈ ತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಪ್ರಿಯಾಮಣಿ, ಛಾಯಾಸಿಂಗ್ ಅವರೊಟ್ಟಿಗೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ “ಕೆ.ಜಿ.ಎಫ್”, “ಕಾಂತಾರ ” ದಂತಹ ಡಿಫರೆಂಟ್ ಜಾನರ್ ನ ಚಿತ್ರಗಳು ಜನರ ಮೆಚ್ಚುಗೆ ಪಡೆಯುತ್ತಿದೆ. ನಮ್ಮ “ಕೈಮರ” ಚಿತ್ರದ ಕಥೆ ಸಹ ಡಿಫರೆಂಟ್ ಆಗಿದ್ದು, ನೋಡುಗರ ಮನ ಗೆಲ್ಲುವ ವಿಶ್ವಾಸವಿದೆ ಎಂದು ನಟಿ ಪ್ರಿಯಾಂಕ ಉಪೇಂದ್ರ ತಿಳಿಸಿದರು.

ಇದೊಂದು ಹಾರಾರ್ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಚಿತ್ರ. ನನ್ನ ನಿರ್ದೇಶನದ ಮೊದಲ ಚಿತ್ರ ಸಹ. ಕಳೆದ ಮೂರುವರ್ಷಗಳಿಂದ “ಕೈಮರ” ಕುರಿತಾದ ಕೆಲಸಗಳು ನಡೆಯುತ್ತಿದ್ದವು. ಕೊರೋನ ಕಾರಣದಿಂದ ಚಿತ್ರೀಕರಣ ಆರಂಭವಾಗುವು ಸ್ವಲ್ಪ ತಡವಾಯಿತು. ಈಗ ದಸರಾದ ಶುಭದಿನದಲ್ಲಿ ಮುಹೂರ್ತ ನಡೆದಿದೆ. ಅಕ್ಟೋಬರ್ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು ನಿರ್ದೇಶನ ಗೌತಮ್ ವಿಮಲ್.

“ಕೈಮರ” ಚಿತ್ರ ಮಾಮೂಲಿ ಚಿತ್ರಗಳಿಗಿಂತ ಸ್ವಲ್ಪ ಭಿನ್ನವಾಗಿರಲಿದೆ.‌ ನಿರ್ದೇಶಕ ಗೌತಮ್ ಈ ಚಿತ್ರ ಉತ್ತಮವಾಗಿ ಬರಲು ಸಾಕಷ್ಟು ಶ್ರಮ ಪಡುತ್ತಿದ್ದಾರೆ. ಪಿ. ವಿಮಲ್ ಕಥೆ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ “ಕೈಮರ” ದಲ್ಲಿರಲಿದೆ.‌ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಮುಖ್ಯಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ನಾನು ಹಾಗೂ ವಿನಯ್ ಗೌಡ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದೇವೆ. ಇದೇ ಹತ್ತನೇ ತಾರೀಖಿನಿಂದ ಚಿತ್ರೀಕರಣ ಆರಂಭಿಸುತ್ತಿದ್ದೇವೆ. “ಕೈಮರ” 2023 ರ ಉತ್ತಮ ಚಿತ್ರವಾಗಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂದು ನಿರ್ಮಾಪಕ ಹಾಗೂ ನಟ ವಿ.ಮತ್ತಿಯಳಗನ್ ತಿಳಿಸಿದ್ದಾರೆ.

Must Read

spot_img
Share via
Copy link
Powered by Social Snap