HomeNewsಫೆ.4ರಂದು ಬೆಳ್ಳಿತೆರೆಗೆ ಎಂಟ್ರಿ‌ ಕೊಡ್ತಾರೆ ‘ಗಜಾನನ ಅಂಡ್ ಗ್ಯಾಂಗ್’ ಹುಡ್ಗರು…!

ಫೆ.4ರಂದು ಬೆಳ್ಳಿತೆರೆಗೆ ಎಂಟ್ರಿ‌ ಕೊಡ್ತಾರೆ ‘ಗಜಾನನ ಅಂಡ್ ಗ್ಯಾಂಗ್’ ಹುಡ್ಗರು…!

ಕನ್ನಡ ಚಿತ್ರರಂಗದಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ ಹಾಗೂ ಶ್ಯಾನೆ ಟಾಪಾಗಿರುವ ನಟಿ ಅದಿತಿ ಪ್ರಭುದೇವ ನಟನೆಯ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 4ರಂದು‌ ಬೆಳ್ಳಿತೆರೆಗೆ ಗಜಾನನ ಗ್ಯಾಂಗ್ ಹುಡ್ಗರು ಎಂಟ್ರಿ‌ ಕೊಡ್ತಿದ್ದಾರೆ. ಸತತ ಎರಡು ವರ್ಷಗಳ ಪರಿಶ್ರಮದ ಕನಸು ಗಜಾನನ ಗ್ಯಾಂಗ್ ಸಿನಿಮಾ ಸ್ಯಾಂಪಲ್ಸ್ ನಲ್ಲೇ ಸದ್ದು ಮಾಡ್ತಿದೆ. ಟ್ರೇಲರ್ ಹಾಗೂ ಸಾಂಗ್ ಮೂಲಕ ಕ್ಯೂರಿಯಾಸಿಟಿ ಹುಟ್ಟಿಸಿರುವ ಗಜಾನನ ಗ್ಯಾಂಗ್ ಸಿನಿಮಾಗೆ ಚಿತ್ರಪ್ರೇಮಿಗಳು ಕುತೂಹಲದಿಂದ ಕಾಯ್ತಿದ್ದಾರೆ.

ನಮ್ ಗಣಿ ಬಿಕಾಂ ಪಾಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪಾದರ್ಪಣೆ ಮಾಡಿದ್ದ ನಟ ಅಭಿಷೇಕ್ ಶೆಟ್ಟಿ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

‘ಗಜಾನನ ಅಂಡ್ ಗ್ಯಾಂಗ್’ ಟೈಟಲೇ ಹೇಳುವಂತೆ ಕಾಲೇಜ್ ಕಥೆಯಾಧಾರಿತ ಸಿನಿಮಾ. ಕಾಮಿಡಿ, ಸೆಂಟಿಮೆಂಟ್ ಕೂಡ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಶ್ರೀ ಮಹಾದೇವ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗಜ ಎಂಬ ಪಾತ್ರದಲ್ಲಿ ಶ್ರೀ ನಟಿಸಿದ್ರೆ, ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ಅಭಿಷೇಕ್ ಶೆಟ್ಟಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬೃಂದಾವನ್ ಎಂಟರ್ ಪ್ರೈಸಸ್ ಅಡಿಯಲ್ಲಿ ಯು ಎಸ್ ನಾಗೇಶ್ ಕುಮಾರ್ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಪ್ರದ್ಯುತನ್ ಮ್ಯೂಸಿಕ್. ಉದಯ ಲೀಲಾ ಕ್ಯಾಮೆರಾ ವರ್ಕ್, ವಿಜೆಟ್ ಚಂದ್ರ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ. ಉಳಿದಂತೆ ಬಿಗ್ ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯ ರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ ಊರೂಫ್ ಬ್ರೋ ಗೌಡ ಕೂಡ ನಟಿಸಿದ್ದಾರೆ.

Must Read

spot_img
Share via
Copy link
Powered by Social Snap