Kannada Beatz
News

“ಗಣ” ನಾಯಕನಾಗಿ ಪ್ರಜ್ವಲ್ ದೇವರಾಜ್.

ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ” ಗಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾಸ್ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ .

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌.

ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್(ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Related posts

ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಟಗರು ಪಲ್ಯ’ ಬೆಡಗಿ ಅಮೃತ ಪ್ರೇಮ್

Kannada Beatz

ಎ.ಹರ್ಷ ನಿರ್ದೇಶನದಲ್ಲಿ ‘ಭೀಮ’ನಾದ ಗೋಪಿಚಂದ್….ಹೇಗಿದೆ ಫಸ್ಟ್ ಲುಕ್?

Kannada Beatz

‘ಆರಾಮ್ ಅರವಿಂದ್ ಸ್ವಾಮಿ’ಗೆ ಬಘೀರ ಸಾಥ್…ನ.22ಕ್ಕೆ ಅನೀಶ್-ಅಭಿಷೇಕ್ ಶೆಟ್ಟಿ ಸಿನಿಮಾ ರಿಲೀಸ್

Kannada Beatz

Leave a Comment

Share via
Copy link
Powered by Social Snap