Kannada Beatz
News

ಮೇ ನಲ್ಲಿ “ಚಂದ್ರಲೇಖ ರಿಟರ್ನ್ಸ್”

ಓಂಪ್ರಕಾಶ್ ರಾವ್ ನಿರ್ದೇಶನದ ಈ ಚಿತ್ರದಲ್ಲಿ ಅಭಿ ನಾಯಕ. ಭೂಮಿಕಾ ನಾಯಕಿ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್ ಓಂಪ್ರಕಾಶ್ ರಾವ್ ನಿರ್ದೇಶನದ ” ಚಂದ್ರಲೇಖ ರಿಟರ್ನ್ಸ್” ಚಿತ್ರ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ.

“ಲವ್ ಮಾಕ್ಟೇಲ್” ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ ಎಲ್ ಮಧುಸೂದನ್ ಈ ಚಿತ್ರದ ನಾಯಕಿ. ಅನನ್ಯ ಪಂಡಿತ್, ರಂಗಾಯಣ ರಘು, ಅಚ್ಯುತಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಅವಿನಾಶ್, ಸುಚೀಂದ್ರ ಪ್ರಸಾದ್, ಚಿತ್ರ ಶೆಣೈ, ಸಂಗೀತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಓಂಪ್ರಕಾಶ್ ರಾವ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಎಂ.ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಓಂಪ್ರೊಡಕ್ಷನ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಅವರೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Related posts

ಕರುನಾಡಿನ ಹೆಮ್ಮೆಯ ಚಲನಚಿತ್ರ ‘ಕಾಂತಾರ ಚಾಪ್ಟರ್ 1’ (Kantara Chapter 1) ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ

Kannada Beatz

ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ತೆರೆಗೆ ಬರಲು ಸಿದ್ದ.

Kannada Beatz

ಯುಗಾದಿ ಹಬ್ಬಕ್ಕೆ ಹೊಸ ಅವತಾರದಲ್ಲಿ ಪ್ರಜ್ವಲ್ ದೇವರಾಜ್

Kannada Beatz

Leave a Comment

Share via
Copy link
Powered by Social Snap