HomeNewsಬಿಡುಗಡೆಗೂ ಮುನ್ನವೇ ಲಾಕ್ ಆದ 'ಪದವಿಪೂರ್ವ' ಚಿತ್ರತಂಡ….. ಮತ್ತೊಂದು ಚಿತ್ರ ಅನೌನ್ಸ್

ಬಿಡುಗಡೆಗೂ ಮುನ್ನವೇ ಲಾಕ್ ಆದ ‘ಪದವಿಪೂರ್ವ’ ಚಿತ್ರತಂಡ….. ಮತ್ತೊಂದು ಚಿತ್ರ ಅನೌನ್ಸ್

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಸಿನಿಮಾದ ಬಗ್ಗೆ ಅದಾಗಲೇ ಸಾಕಷ್ಟು ಸುದ್ದಿಗಳನ್ನು ಕೇಳಿರುತ್ತೀರಿ. ಈ ಚಿತ್ರವನ್ನು ಭಟ್ಟರ ತಂಡದ ಪ್ರಮುಖ ಸದಸ್ಯ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿದ್ದಾರೆ ಎನ್ನುವುದು ಕೂಡ ನಿಮಗೆಲ್ಲ ತಿಳಿದಿರುವ ವಿಚಾರ. ಆದರೆ ಈಗ ‘ಪದವಿಪೂರ್ವ’ ಚಿತ್ರ ಇನ್ನೂ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವಾಗಲೇ ನಿರ್ಮಾಣ ಸಂಸ್ಥೆ ಇದೇ ನಿರ್ದೇಶಕರೊಡನೆ ಮತ್ತೊಂದು ಚಿತ್ರ ಅನೌನ್ಸ್ ಮಾಡಿದೆ. ಹೌದು, ಪೋಸ್ಟ್ ಪ್ರೊಡಕ್ಷನ್ ಕಾರ್ಯದ ನಡುವೆ ಸಿನಿಮಾ ವೀಕ್ಷಣೆ ಮಾಡಿರುವ ನಿರ್ಮಾಪಕರಲ್ಲೊಬ್ಬರಾದ ವಿಕಟಕವಿ ಯೋಗರಾಜ್ ಭಟ್ಟರು, ತಮ್ಮ ತಂಡದ ನೆಚ್ಚಿನ ಸದ್ಯಸ್ಯ, ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರ ಕಾರ್ಯವೈಖರಿಯನ್ನು ಮೆಚ್ಚಿ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲು ತಯಾರಾಗಿದ್ದಾರೆ ಎನ್ನಲಾಗಿದೆ. ಸಿನಿಮಾದ ಮತ್ತೊಬ್ಬ ನಿರ್ಮಾಪಕರಾದ ರವಿ ಶಾಮನೂರ್ ಅವರೂ ಸಹ ಭಟ್ಟರ ನಿರ್ಮಾಣ ಸಂಸ್ಥೆಯೊಡನೆ ಮತ್ತೊಮ್ಮೆ ಸಹಭಾಗಿತ್ವ ವಹಿಸಲು ಖುಷಿಯಿಂದ ಒಪ್ಪಿಕೊಂಡಿದ್ದಾರಂತೆ.

ಅಕ್ಟೋಬರ್ ತಿಂಗಳಿನಲ್ಲಿ ಸೆಟ್ಟೇರಲಿರುವ ಈ ಹೊಸ ಚಿತ್ರಕ್ಕೂ ‘ಪದವಿಪೂರ್ವ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದ ಯುವ ನಟ ಪೃಥ್ವಿ ಶಾಮನೂರ್ ಅವರೇ ನಾಯಕನಾಗಿ ಮುಂದುವರೆಯಲಿದ್ದಾರೆ. ಪೃಥ್ವಿ ಈಗಾಗಲೇ ಯೋಗರಾಜ್ ಭಟ್ಟರ ಮುಂಬರಲಿರುವ ‘ಗರಡಿ’ ಸಿನಿಮಾದಲ್ಲೂ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಭಟ್ಟರ ಕ್ಯಾಂಪ್‌ನಲ್ಲಿ ಸತತವಾಗಿ ಅವಕಾಶ ಗಿಟ್ಟಿಸುವುದು ಅಷ್ಟು ಸುಲಭದ ಮಾತಲ್ಲ. ತನ್ನ ಅಸಾಧಾರಣ ಪ್ರತಿಭೆಯಿಂದ ಭಟ್ಟರನ್ನು ಹಾಗು ತಂಡವನ್ನು ಮೋಡಿ ಮಾಡಿರುವ ಈ ಯುವ ನಟನ ಅಭಿನಯ ಕೌಶಲ್ಯಕ್ಕೆ ನಮ್ಮದೊಂದು ಸಲಾಂ.

ಚಿತ್ರತಂಡ ಈ ಬಾರಿಯೂ ಮತ್ತಷ್ಟು ಹೊಸ ಪ್ರತಿಭೆಗಳ ಹುಡುಕಾಟ ನಡೆಸಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಆಡಿಶನ್ ಮೂಲಕ ಅಪ್ಪಟ ದೇಸಿ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇನ್ನುಳಿದಂತೆ ‘ಪದವಿಪೂರ್ವ’ ಚಿತ್ರಕ್ಕಾಗಿ ದುಡಿದಿದ್ದ ಉತ್ಸಾಹಿ ಯುವ ತಂತ್ರಜ್ಞರ ತಂಡದ ಬಹುತೇಕ ಸದಸ್ಯರೇ ಸೆಟ್ಟೇರಲಿರುವ ಹೊಸ ಸಿನಿಮಾದಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ ಎಂದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ತಿಳಿಸಿದ್ದಾರೆ.

Work hard in silence, Let success make the noise ಎನ್ನುವಂತೆ, ತಮ್ಮ ಅಚ್ಚುಕಟ್ಟಾದ ಕೆಲಸದಿಂದ ಗುರುತಿಸಿಕೊಂಡು, ಅದೇ ನಿರ್ಮಾಣ ಸಂಸ್ಥೆಗಳೊಡನೆ ಮತ್ತೊಂದು ಚಿತ್ರದ ಅವಕಾಶ ಪಡೆದುಕೊಂಡ ನಾಯಕ ನಟ ಪೃಥ್ವಿ ಶಾಮನೂರ್ ಮತ್ತು ನಿರ್ದೇಶಕ ಹರಿಪ್ರಸಾದ್ ಜಯಣ್ಣ ಹಾಗು ತಂಡಕ್ಕೆ ಆಲ್ ದಿ ಬೆಸ್ಟ್.

Must Read

spot_img
Share via
Copy link
Powered by Social Snap