“ಭರ್ಜರಿ ಗಂಡು” ಚಿತ್ರತಂಡದಿಂದ ಮತ್ತೊಂದು ಹೊಸ ಚಿತ್ರ
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಳ್ಳುತ್ತಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ಹಾಗೂ ಪ್ರಸಿದ್ದ್ ನಿರ್ದೇಶಿಸುತ್ತಿರುವ “ಭರ್ಜರಿ ಗಂಡು” ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಡಬ್ಬಿಂಗ್ ನಡೆಯುತ್ತಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರದ ಬಗ್ಗೆ ಹಾಗೂ ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನ್ ಬಗ್ಗೆ ಉತ್ತಮ ಮಾತುಗಳು ಕೇಳಿ ಬರುತ್ತಿದೆ.
ಇದೇ ಸಂದರ್ಭದಲ್ಲಿ ಇವರಿಬ್ಬರ ಜೋಡಿಯ ಮತ್ತೊಂದು ಭರ್ಜರಿ ಆಕ್ಷನ್ ಓರಿಯೆಂಟೆಡ್ ಚಿತ್ರ ಆರಂಭವಾಗುತ್ತಿದೆ. ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ಬಂಡಿಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.
ಚಿತ್ರತಂಡದ ಸದಸ್ಯರು ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪ್ರಸಿದ್ದ್ ಫಿಲಂ ಲಾಂಛನದಲ್ಲಿ “ಭರ್ಜರಿ ಗಂಡು” ಚಿತ್ರ ನಿರ್ಮಾಣವಾಗುತ್ತಿದ್ದು, ಅದೇ ಬ್ಯಾನರ್ ನಲ್ಲಿ ಈ ಚಿತ್ರ ಕೂಡ ನಿರ್ಮಾಣವಾಗಲಿದೆ.
ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಶುರುವಾಗಲಿದೆ.
ಈ ಚಿತ್ರದಲ್ಲಿ ಕಿರಣ್ ರಾಜ್ ಪಕ್ಕಾ ಲೋಕಲ್ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಸುರೇಖ ಅಭಿನಯಿಸಲಿದ್ದಾರೆ.
ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.
ಸುದರ್ಶನ್ ಸುಂದರರಾಜ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ, ಕಿಟ್ಟಿ ಕೌಶಿಕ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಹಾಗೂ ವೆಂಕಿ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.