HomeNewsಮತ್ತೆ ನಿರ್ಮಾಣ ಸಾಹಸಕ್ಕಿಳಿದ ಅಜಯ್ ರಾವ್ - ‘ಕಟಿಂಗ್ ಶಾಪ್’ ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್

ಮತ್ತೆ ನಿರ್ಮಾಣ ಸಾಹಸಕ್ಕಿಳಿದ ಅಜಯ್ ರಾವ್ – ‘ಕಟಿಂಗ್ ಶಾಪ್’ ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್

ಚಂದನವನದ ಪ್ರತಿಭಾವಂತ ನಟ ಅಜಯ್ ರಾವ್ ಹೊಸದೊಂದು ಸಿನಿಮಾಗೆ ಸಜ್ಜಾಗುತ್ತಿದ್ದಾರೆ. ಪವನ್ ಭಟ್ ನಿರ್ದೇಶನದ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದು ಈ ಚಿತ್ರದ ನಿರ್ಮಾಣವನ್ನು ಅಜಯ್ ರಾವ್ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ ನಟ ಅಜಯ್ ರಾವ್.

ನಿರ್ದೇಶಕ ಪವನ್ ಭಟ್ ಕಥೆ ಕೇಳಿ ಇಂಪ್ರೆಸ್ ಆಗಿರುವ ಅಜಯ್ ರಾವ್ ತಮ್ಮದೇ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಲು ಡಿಸೈಡ್ ಮಾಡಿದ್ದಾರೆ. ‘ಕಟಿಂಗ್ ಶಾಪ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಪವನ್ ಭಟ್ ಎರಡನೇ ಸಿನಿಮಾವಿದು. ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದೆ. ಸದ್ಯದಲ್ಲೇ ಟೈಟಲ್ ಹಾಗೂ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

Must Read

spot_img
Share via
Copy link
Powered by Social Snap