Kannada Beatz
News

ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ‌ಅವರಿಗೆ ಫಸ್ಟ್ ಲುಕ್ ಪೋಸ್ಟರ್ ಅರ್ಪಿಸಿದ ಚಿತ್ರತಂಡ.

ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿ ಶುಭ ಕೋರಿದರು.
ಈ ಚಿತ್ರದ ಫಸ್ಟ್ ಲುಕನ್ನು ಚಿತ್ರತಂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಸಮರ್ಪಿಸಿದೆ.
ಆರ್ಯವರ್ಧನ್ ಅವರಿಗೆ ನಾಯಕಿಯರಾಗಿ‌ ಪ್ರಿಯಾಂಕ ರಿವಾರಿ, ಪಾವನಿ ಹಾಗೂ ವರ್ಷ ನಟಿಸುತ್ತಿದ್ದಾರೆ.

ಹಿರಿಯ ನಟ ವಿನೋದ್ ಕುಮಾರ್, ರಚ ರವಿ, ರಾಮು(ಜ್ಯೂನಿಯರ್ ರಾಜಕುಮಾರ್), ಶೋಭನ್ ಅಕ್ಷರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಎಂ.ರಮೇಶ್‌ ಹಾಗೂ ಗೋಪಿ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಬಿ.ಶ್ರೀನಿವಾಸ ರಾವ್ ಹಾಗೂ ರೋಶಿನಿ ನೌಡಿಯಲ್ ನಿರ್ಮಿಸುತ್ತಿದ್ದಾರೆ.

ಮಹಿತ್ ನಾರಾಯಣ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಶ್ರೀ ವಸಂತ್ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಎ.ಕೆ.ಆನಂದ್ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ ಹಾಗೂ ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ “ಯಾರಿಗೆ ಬೇಕು ಈ ಲೋಕ” ಚಿತ್ರಕ್ಕಿದೆ.

Related posts

ಆರಕ್ಷಕರಿಗೆ ದೊಡ್ಡ “ಸೆಲ್ಯೂಟ್”

Kannada Beatz

SONY PICTURES in Association with “MARVEL’S” Hosts the Celebrity Premiere show of “MORBIUS” in Namma BENGALURU.

Kannada Beatz

ಜೋರಾಗಿದೆ “ಬಡ್ಡೀಸ್” ಗೆಲುವಿನ ಓಟ.

Kannada Beatz

Leave a Comment

Share via
Copy link
Powered by Social Snap