Kannada Beatz
News

“ಶ್ಯಾನುಭೋಗರ ಮಗಳಾಗಿ” ರಾಗಿಣಿ ಪ್ರಜ್ವಲ್.

ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶ್ಯಾನುಭೋಗರ ಮಗಳು” ಚಿತ್ರ ಸ್ವತಂತ್ರ ಪೂರ್ವದ ಕಥೆ.
ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಈ ಚಿತ್ರದ ನಿರ್ದೇಶಕರು.

ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ.

ಭುವನ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

“ಶ್ಯಾನುಭೋಗರ ಮಗಳು” ಚಿತ್ರದ ಪ್ರಮುಖಪಾತ್ರದಲ್ಲಿ ರಾಗಿಣಿ ಪ್ರಜ್ವಲ್ ಅಭಿನಯಿಸುತ್ತಿದ್ದಾರೆ. ಮೇಘಶ್ರೀ, ನಿರಂಜನ್ ಕುಮಾರ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ‌ಶಂಕರ್ ಅಶ್ವತ್ಥ್ , ನೀನಾಸಂ ಅಶ್ವತ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಚಿತ್ರದಲ್ಲಿ ಟಿಪ್ಪಸುಲ್ತಾನ್ ಪ್ರಮುಖ ಪಾತ್ರವಾಗಿದ್ದು, ಆ ಪಾತ್ರಕ್ಕಾಗಿ ಆಯ್ಕೆ ಕಾರ್ಯ ನಡೆಯುತ್ತಿದೆ.

ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

Related posts

‘ಹೊಂದಿಸಿ ಬರೆಯಿರಿ’ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್- ಫೆಬ್ರವರಿ 10ಕ್ಕೆ ಸಿನಿಮಾ ರಿಲೀಸ್

Kannada Beatz

ಧನ್ವೀರ್ ಹುಟ್ಟುಹಬ್ಬಕ್ಕೆ ಹೊಸಚಿತ್ರದ ಘೋಷಣೆ

Kannada Beatz

“ಸೂತ್ರಧಾರಿ”ಯಾದ ಚಂದನ್ ಶೆಟ್ಟಿ.

Kannada Beatz

Leave a Comment

Share via
Copy link
Powered by Social Snap