Kannada Beatz
News

ಗೋಲ್ಡನ್‌ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದರು “ವರದ”‌ ಚಿತ್ರದ ಹಾಡು.

ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರ ಜನವರಿ 28 ರಂದು ತೆರೆಗೆ.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಯಾರೇ ನೀನು” ಎಂಬ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. ಬಿಡುಗಡೆ ಆದ ಕೆಲವೇ ಕ್ಷಣಗಳಲ್ಲಿ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

“ರಾಬರ್ಟ್” ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಈ ಚಿತ್ರ ಜನವರಿ
28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್.

ಕೆ.ಕಲ್ಯಾಣ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು

Kannada Beatz

ಸಖತ್ ಸಸ್ಪೆನ್ಸ್ ಆಗಿದೆ ‘ಅನಾವರಣ’ ಟ್ರೇಲರ್…ಅರ್ಜುನ್ ಯೋಗಿ ಸಿನಿಮಾಗೆ ಕಿಚ್ಚ ಸುದೀಪ್ ಬೆಂಬಲ

Kannada Beatz

ಆಪರೇಷನ್ ಲಂಡನ್ ಕೆಫೆ ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಮೇಘಾ ಶೆಟ್ಟಿ!

Kannada Beatz

Leave a Comment

Share via
Copy link
Powered by Social Snap