Kannada Beatz
News

ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’

ವಿಜಯ್ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಈ ಚಿತ್ರವನ್ನು ರೆಡ್ ಜಯಂಟ್ ಮೂವಿಸ್ನಡಿ ಉದಯನಿಧಿ ಸ್ಟಾಲಿನ್ ಅರ್ಪಿಸಿದರೆ, ಆರ್.ಎಸ್. ಇನ್ಫೋಟೈನ್ಮೆಂಟ್ನಡಿ ಎಲ್ರೆಡ್ ಕುಮಾರ್ ನಿರ್ಮಿಸುತ್ತಿದ್ದಾರೆ.
ಕಾಲಿವುಡ್ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್ ಪ್ರಮುಖರು. ಕೆಲವು ತಿಂಗಳುಗಳ ಹಿಂದೆ ಅವರು ‘ವಿಡುದಲೈ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಘೋಷಿಸಿದಾಗಲೇ, ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ನರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ, ಈ ಚಿತ್ರದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ.


ಸದ್ಯ, ‘ವಿಡುದಲೈ’ ಚಿತ್ರದ ಭಾಗ ಒಂದರ ಚಿತ್ರೀಕರಣ ಸಂಪೂರ್ಣವಾಗಿದ್ದು, ಪೋಸ್ಟ್ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿವೆ. ಎರಡನೆಯ ಭಾಗದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು ಸಿರುಮಲೈ, ಕೊಡೈಕೆನಾಲ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಈ ಎರಡು ಚಿತ್ರಗಳು ದೊಡ್ಡ ಬಜೆಟ್ನಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳಿನ ಕಾಸ್ಟ್ಲಿ ಚಿತ್ರಗಳ ಪೈಕಿ ‘ವಿಡುದಲೈ’ ಸಹ ಸೇರ್ಪಡೆಯಾಗಲಿದೆ.


ಈ ಚಿತ್ರವನ್ನು ಕೋಟ್ಯಂತರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿದ್ದು, ಚಿತ್ರಕ್ಕಾಗಿ ವಿಶೇಷವಾಗಿ 10 ಕೋಟಿ ರೂ. ವೆಚ್ಚದ ರೈಲು ಮತ್ತು ರೈಲ್ವೇ ಸೇತುವೆಯ ಸೆಟ್ ನಿರ್ಮಾಣ ಮಾಡಲಾಗಿದೆ. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್ ನಿರ್ಮಾಣಕ್ಕೂ ಬಳಸಲಾಗಿರುವುದು ವಿಶೇಷ. ಇದಲ್ಲದೆ, ಸಿರುಮಲೈ ಬಳಿ ಜಾಕಿ ಅವರ ಕಲಾ ನಿರ್ದೇಶನದಲ್ಲಿ ಒಂದು ಹಳ್ಳಿಯನ್ನು ನಿರ್ಮಿಸಲಾಗಿದೆ.
ಸದ್ಯ ಕೊಡೈಕೆನಾಲ್ನಲ್ಲಿ ಪೀಟರ್ ಹೇನ್ಸ್ ನಿರ್ದೇಶನದಲ್ಲಿ ಸಾಹಸಮಯ ದೃಶ್ಯಗಳನ್ನು ಚಿತ್ರೀಕರಿಸುವುದಕ್ಕೆ ತಯಾರಿ ನಡೆಸಲಾಗಿದ್ದು, ಇದಕ್ಕಾಗಿ ಬಲ್ಗೇರಿಯಾದಿಂದ ಸಾಹಸ ಕಲಾವಿದರನ್ನು ಕರೆಸಲಾಗಿದೆ. ಈ ಆಕ್ಷನ್ ದೃಶ್ಯಗಳಲ್ಲಿ ಬಲ್ಗೇರಿಯಾದ ಸಾಹಸ ಕಲಾವಿದರು ಸಹ ಭಾಗವಹಿಸುತ್ತಿರುವುದು ವಿಶೇಷ.


‘ವಿಡುದಲೈ’ ಚಿತ್ರದಲ್ಲಿ ವಿಜಯ್ ಸೇತುಪತಿ, ಸೂರಿ, ಭವಾನಿ ಶ್ರೀ, ಪ್ರಕಾಶ್ ರಾಜ್, ಗೌತಮ್ ವಾಸುದೇವ ಮೆನನ್, ರಾಜೀವ್ ಮೆನನ್ ಮುಂತಾದವರು ನಟಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ‘ಇಸೈಜ್ನಾನಿ’ ಇಳಯರಾಜ ಈ ಚಿತ್ರದ ಸಂಗೀತದ ಜವಾಬ್ದಾರಿ ಹೊತ್ತಿದ್ದು, ವೇಲ್ರಾಜ್ ಛಾಯಾಗ್ರಹಣ ಮಾಡುತ್ತಿದ್ದಾರೆ.
ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ರೆಡ್ ಜೈಂಟ್ ಮೂವೀಸ್ ವಹಿಸಿಕೊಂಡಿದ್ದು, ಸದ್ಯದಲ್ಲೇ ‘ವಿಡುದಲೈ’ ಮೊದಲ ಭಾಗದ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.

Instagram – Viduthalai

@actorvijaysethupathi @soorimuthuchamy #ilaiyaraaja #elredkumar @udhay_stalin
@rsinfotainment
@Sudheendravenkatesh_pro
@raghavendrachitravani
@redgiantmovies_
@peterheinoffl @mani.rsinfo @r.velraj.isc @donechannel1

Related posts

ARYAN ROSHAN won a prestigious DADASAHEB palke international award 2023 – 2024 for best choreography

Kannada Beatz

ಅಪ್ಪು ನೆನಪಲ್ಲಿ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್ – ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ಮಕ್ಕಳ ಚಿತ್ರಕ್ಕೆ ಪ್ರೋತ್ಸಾಹ.

Kannada Beatz

ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು.

Kannada Beatz

Leave a Comment

Share via
Copy link
Powered by Social Snap