Kannada Beatz
News

ಮತ್ತೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಉಡುಂಬಾ ನಿರ್ದೇಶಕ ಶಿವರಾಜ್ ತಯಾರಿ – ಶೀಘ್ರದಲ್ಲೇ ಟೈಟಲ್ ರಿವೀಲ್.

‘ಉಡುಂಬಾ’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ಶಿವರಾಜ್ ಮತ್ತೊಂದು ಹೊಸ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ‘ಐ 1’, ‘ಮೃತ್ಯುಂಜಯ’ ಸಿನಿಮಾ ನಿರ್ಮಿಸಿರುವ ಎಸ್ ಪಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಐದನೇ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ ಶಿವರಾಜ್.

ಈ ಬಾರಿ ಮತ್ತೊಂದಿಷ್ಟು ಹೊಸತನದೊಂದಿಗೆ ಶಿವರಾಜ್ ಕಥೆ ರೆಡಿ ಮಾಡಿಕೊಂಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನಕ್ಕೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಸದ್ಯದಲ್ಲೇ ಸಿನಿಮಾದ ಟೈಟಲ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ದೊಡ್ಡ ತಾರಾಬಳಗ ಸಿನಿಮಾದಲ್ಲಿರಲಿದ್ದು, ಡಿಸೆಂಬರ್ ಕೊನೆಯಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕ ಶಿವರಾಜ್ ತಿಳಿಸಿದ್ದಾರೆ.

ಥ್ರಿಲ್ಲರ್ ಜಾನರ್ ಒಳಗೊಂಡ ಈ ಚಿತ್ರದಲ್ಲಿ ಕಿಶೋರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ‘ಐ1’ ಸಿನಿಮಾದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟ ಕಿಶೋರ್ ಗಿದು ಎರಡನೇ ಸಿನಿಮಾ. ನಾಯಕಿಯರ ಹುಡುಕಾಟದಲ್ಲಿ ಚಿತ್ರತಂಡವಿದ್ದು, ಇಬ್ಬರು ನಾಯಕಿಯರು ಸಿನಿಮಾದಲ್ಲಿರಲಿದ್ದು ಟಾಪ್ ನಟಿಯರ ತಲಾಶ್ ನಲ್ಲಿದ್ದಾರೆ ನಿರ್ದೇಶಕರು.

ಎಸ್ ಪಿ ಪಿಕ್ಚರ್ಸ್ ಬ್ಯಾನರ್ ನಡಿ ಶೈಲಜಾ ಪ್ರಕಾಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಈ ಬ್ಯಾನರ್ ನಲ್ಲಿ ಮೂಡಿ ಬರ್ತಿರುವ ಐದನೇ ಸಿನಿಮಾ ಇದಾಗಿದೆ. ರಂಗಾಯಣ ರಘು, ಸುಜಯ್ ಶಾಸ್ತ್ರಿ, ತೆಲುಗು ಹಾಗೂ ತಮಿಳು ಸಿನಿಮಾ ಖ್ಯಾತಿಯ ಮಧುಸೂದನ್ ಚಿತ್ರದ ತಾರಾಬಳಗದಲ್ಲಿದ್ದಾರೆ.

ಝೀ ವಾಹಿನಿಯ ಸರಿಗಮಪ ಮೆಂಟರ್ ಸುಚೇತನ್ ರಂಗಸ್ವಾಮಿ ಸಂಗೀತ ನಿರ್ದೇಶನ, ಕಬ್ಜ, ಮಾರ್ಟಿನ್, ನಟ ಸಾರ್ವಭೌಮ ಖ್ಯಾತಿಯ ಮಹೇಶ್ ರೆಡ್ಡಿ ಸಂಕಲನ ಚಿತ್ರಕ್ಕಿದೆ. ಭರ್ಜರಿ ಚೇತನ್, ಜೋಗಿ ಪ್ರೇಮ್, ಅಲೆಮಾರಿ ಸಂತು ಹಾಗೂ ಹೊಸ ಪ್ರತಿಭೆ ಸಂತೋಷ್ ಸಾಹಿತ್ಯದಲ್ಲಿ ಚಿತ್ರದ ಹಾಡುಗಳು ಮೂಡಿ ಬರಲಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿಯಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

Related posts

ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕಥಾನಕ “ಲವ್ ರೀಸೆಟ್” .

Kannada Beatz

ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ..ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ ಮಾಡಿದ RGV

Kannada Beatz

‘ವಾಸಂತಿ ನಲಿದಾಗ’ ಬಿಡುಗಡೆ ದಿನಾಂಕ ಮುಂದೂಡಿಕೆ – ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ ರವಿಂದ್ರ ವೆಂಶಿ ಸಿನಿಮಾ

Kannada Beatz

Leave a Comment

Share via
Copy link
Powered by Social Snap