Kannada Beatz
News

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ .

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಲವ ವಿ ನಿರ್ದೇಶನ .

ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ಬೆನ್ನಲ್ಲೇ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದೇ ತಿಂಗಳ 20ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

ಸಿರಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಪಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ವಿ.ಲವ ಅವರೆ ನಿರ್ದೇಶನ ಮಾಡುತ್ತಿದ್ದಾರೆ. “ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಛಾಯಾಗ್ರಹಣ ಹಾಗೂ ಡೇವಿ ಸುರೇಶ್ ಅವರ ಸಂಗೀತ ನಿರ್ದೇಶನವಿರುವ “ಬಾಸ್” ಚಿತ್ರಕ್ಕೆ “ಸತ್ಯಮೇವ ಜಯತೇ” ಎಂಬ ಅಡಿಬರಹವಿದೆ. ಇದೊಂದು ಬೆಂಗಳೂರಿನಲ್ಲಿ ನಡೆದ ನೈಜಘಟನೆಯನ್ನು ಆಧರಿಸಿದ ಚಿತ್ರವಾಗಿದೆ.

Related posts

ಅದ್ದೂರಿ ಸೆಟ್ ನಲ್ಲಿ ರೆಟ್ರೊ ಶೈಲಿಯ ಹಾಡಿನೊಂದಿಗೆ ಪೂರ್ಣವಾಯಿತು “ಪರಿಮಳ ಡಿಸೋಜಾ” ಚಿತ್ರದ ಚಿತ್ರೀಕರಣ

Kannada Beatz

ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ .

Kannada Beatz

ಕಲರ್ ಫುಲ್ ಕರುನಾಡ ಸಂಭ್ರಮಕ್ಕೆ ತೆರೆ- ಗೆಲುವು ಕನ್ನಡ ಗೆಳೆಯರ ಬಳಗದಿಂದ ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ‌ ಕಲಾ ಭೂಷಣ’ ಪ್ರಶಸ್ತಿ.

Kannada Beatz

Leave a Comment

Share via
Copy link
Powered by Social Snap