Kannada Beatz
News

ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್” ಚಿತ್ರ ತೆರೆಗೆ ಬರಲು ಸಿದ್ದ.

ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ಗೋವಾ, ಮಾಲೂರು, ತುಮಕೂರು ಮುಂತಾದ ಕಡೆ 45 ದಿನಗಳ ಚಿತ್ರೀಕರಣ ನಡೆದಿದೆ‌. ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.

ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಸತ್ಯಜಿತ್‌, “ಬುಲೆಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನ ತಂದೆಯ ಪಾತ್ರದಲ್ಲೂ ಸತ್ಯಜಿತ್ ನಟಿಸಿದ್ದಾರೆ. ಕನ್ನಡದಲ್ಲಿ ಅವರಿಗೆ ಮೊದಲ ಚಿತ್ರ. ಇಶಾಕ್ ಕಾಝಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಧರ್ಮ ಕೀರ್ತಿರಾಜ್ ಅವರಿಗೆ ನಾಯಕಿಯಾಗಿ
ಶ್ರೀಯಾ ಶುಕ್ಲ ಹಾಗೂ ಅಜಿತಾ ಅಭಿನಯಿಸಿದ್ದಾರೆ. ಹಿರಿಯ ನಟಿ ಭವ್ಯ ಸಹ ಮುಖ್ಯಪಾತ್ರದಲ್ಲಿದ್ದಾರೆ. ಬಾಲಿವುಡ್ ನ ಖ್ಯಾತ ನಟರಾದ ಅಮಿತಾಬ್ ಬಚ್ಚನ್, ಶಾರುಕ್ ಖಾನ್, ಅಮೀರ್ ಖಾನ್ ಮುಂತಾದವರ ಚಿತ್ರಗಳಲ್ಲಿ ನಟಿಸಿರುವ ಶಿವ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಅಧಿಕಾರಿ ಪಾತ್ರ ನಿರ್ವಹಿಸಿದ್ದಾರೆ.
ಇಶಾಕ್ ಕಾಝಿ, ಸತ್ಯಜಿತ್, ಮಾಸ್ಟರ್ ಸಿದ್ ಟೈನ್, ಶಿವ, ರಾಜ ದೀಪ್, ಕಿಲ್ಲರ್ ವೆಂಕಟೇಶ್, ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

“ಬುಲೆಟ್” ಚಿತ್ರಕ್ಕೆ ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿದೆ. ಮೂರು ಹಾಡುಗಳಿದ್ದು ರಾಜ್ ಭಾಸ್ಕರ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ಸಂಕಲನ ಹಾಗೂ ಅಲ್ಟಿಮೇಟ್ ಶಿವು, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

“ಬುಲೆಟ್” ಎಂದರೆ ವಾಹನವಲ್ಲ. ಬಂದೂಕಿನ ಒಳಗಿರುವ “ಬುಲೆಟ್” ಇದು ಎಂದು ಚಿತ್ರತಂಡ ಮಾಹಿತಿ ನೀಡಿದೆ.

Related posts

ಕೋಟಿಜನರ ಮನಮುಟ್ಟಿದೆ “ಜ್ಯೂಲಿಯೆಟ್ 2” ಚಿತ್ರದ ಬಾಂಧವ್ಯದ ಹಾಡು.

Kannada Beatz

ನ್ಯಾಚುರಲ್ ಸ್ಟಾರ್ ನಾನಿ ‘ದಸರಾ’ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್- ನಾಳೆ ಬಹು ನಿರೀಕ್ಷಿತ ಟೀಸರ್ ಗ್ರ್ಯಾಂಡ್ ರಿಲೀಸ್

Kannada Beatz

ದೊಡ್ಡ ಆಟಕ್ಕೆ ಜೊತೆಯಾದ ರಾಜವರ್ಧನ್ & ಚಂದ್ರಚೂಡ್ ಚಕ್ರವರ್ತಿ

Kannada Beatz

Leave a Comment

Share via
Copy link
Powered by Social Snap