Kannada Beatz
News

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯ .

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ ಮೈಸೂರಿನಲ್ಲೇ “ಡ್ಯಾಡ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.

ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್‍. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವರಾಜ್‍ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್‍ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್‍ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಅವರ ಛಾಯಾಗ್ರಹಣವಿದೆ.

Related posts

ಯಶವಂತ್ ನಟನೆಯ ‘ವಿಕಿಪೀಡಿಯ’ ಸಿನಿಮಾದ ಟ್ರೇಲರ್ ರಿಲೀಸ್…ಆಗಸ್ಟ್ 26ಕ್ಕೆ ತೆರೆಗೆ ಬರ್ತಿದೆ ಸಿನಿಮಾ

Kannada Beatz

ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು

Kannada Beatz

ಅನೂಪ್‍ ರೇವಣ್ಣ ಈಗ “ಕನಕರಾಜ”.

Kannada Beatz

Leave a Comment

Share via
Copy link
Powered by Social Snap