HomeNewsಡೊಳ್ಳು ಸಿನಿಮಾ ಮುಕುಟಕ್ಕೆ ಮತ್ತೊಂದು ಪ್ರಶಸ್ತಿಯ ಗರಿ.. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾದ ಪವನ್...

ಡೊಳ್ಳು ಸಿನಿಮಾ ಮುಕುಟಕ್ಕೆ ಮತ್ತೊಂದು ಪ್ರಶಸ್ತಿಯ ಗರಿ.. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾದ ಪವನ್ ಒಡೆಯರ್ ಸಿನಿಮಾ

ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ ಸೇರಿದೆ.

ಡೊಳ್ಳು ಕುಣಿತದ ಸುತ್ತ ಸಾಗುವ ಈ ಸಿನಿಮಾವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದು, ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ. ಚಿತ್ರರಂಗಕ್ಕೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ಮೂಲಕ ಪತ್ನಿ ಅಪೇಕ್ಷಾ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.

ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು ಸಿನಿಮಾ ಹಲವು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿದ್ದ ಟೀಸರ್ ಭಾರೀ ಸದ್ದು ಮಾಡಿತ್ತು. ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾ ಕೈಚಳಕ ಇರುವ ಈ ಚಿತ್ರ ಶೀರ್ಘದಲ್ಲಿಯೇ ತೆರೆಗೆ ಬರಲಿದೆ.

Must Read

spot_img
Share via
Copy link
Powered by Social Snap