‘ಫಸ್ಟ್ ಸ್ಯಾಲರಿ’ ಕಿರುಚಿತ್ರ ಮೂಲಕ ನಿರ್ದೇಶಕರಾದ ವೆಂಕಟೇಶ್ ಮಗ ಪವನ್ ವೆಂಕಟೇಶ್
ಕನ್ನಡ ಚಿತ್ರರಂಗದಲ್ಲಿ ಸಂಪರ್ಕಕೊಂಡಿಯಾಗಿ ಕಳೆದ ಐದು ದಶಕಗಳಿಂದ ಕೆಲಸ ಮಾಡುತ್ತಿರುವ ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಮೂಲಕ ಡಿ.ವಿ. ಸುಧೀಂದ್ರ ಅವರು ‘ಒಲವಿನ ಉಡುಗೊರೆ’, ‘ಗಣೇಶನ ಮದುವೆ’, ‘ಗುಂಡನ ಮದುವೆ’, ‘ಪಟ್ಟಣಕ್ಕೆ ಬಂದ ಪುಟ್ಟ’ ಮತ್ತು ‘ನಗು ನಗುತಾ ನಲಿ’ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

ಇದೀಗ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್ ನಿರ್ದೇಶನದಲ್ಲಿ ‘ಫಸ್ಟ್ ಸ್ಯಾಲರಿ’ ಕಿರುಚಿತ್ರವನನು ನಿರ್ಮಿಸಿದ್ದು, ಈ ಚಿತ್ರಕ್ಕೆ ‘ಕನಸುಗಳ ಹಾದಿ’ ಎನ್ನುವ ಅಡಿಬರಹವಿದೆ. ‘ಫಸ್ಟ್ ಸ್ಯಾಲರಿ’ ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಕರೋನ ಸಮಯದಲ್ಲಿ ‘ಕರಾಳ ರೋಗ ನಾಶ’ ಎಂಬ ಕಿರುಚಿತ್ರ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಅನುಭವ ಹೊಂದಿರುವ ಪವನ್ ವೆಂಕಟೇಶ್, ಈಗ ‘ಫಸ್ಟ್ ಸ್ಯಾಲರಿ’ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಕಿರುಚಿತ್ರದಲ್ಲಿ ಹಿರಿಯ ಕಲಾವಿದರಾದ ಹರಿಣಿ ಶ್ರೀಕಾಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ವಿಜಯ್ ಶಿವಕುಮಾರ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂ ಚಾನಲ್‍ನಲ್ಲೇ ಈ ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದು ತಾಯಿಯ ಸೆಂಟಿಮೆಂಟ್ ಆಧರಿಸಿದ ಕಿರುಚಿತ್ರವಾಗಿದ್ದು, ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

ಈ ಕಿರುಚಿತ್ರದಲ್ಲಿ ಒಂದು ಹಾಡಿದ್ದು, ಡಿಐ ಸೇರಿದಂತೆ ಒಟ್ಟಾರೆ ಕಿರುಚಿತ್ರದ ತಯಾರಿಕೆಗೆ 2 ರಿಂದ ಮೂರು ತಿಂಗಳು ಹಿಡಿದಿದೆ. ’ಫಸ್ಟ್ ಸ್ಯಾಲರಿ’ ಕಿರುಚಿತ್ರ ಒಟ್ಟಾರೆ 24 ನಿಮಿಷದ ಅವಧಿ ಇದೆ. ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್ ಮತ್ತು ರವಿ ಸಾಸನೂರು ಕೆಲಸ ಮಾಡಿದ್ದು ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜೊತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ಸಂಯೋಜಿಸಿದ್ದಾರೆ. ಡಿ.ಎಸ್. ಸುನೀಲ್ ಸುಧೀಂದ್ರ ಮತ್ತು ಡಿ.ಜಿ. ವಾಸುದೇವ್ ಪತ್ರಿಕಾ ಸಂಪರ್ಕವಿದ್ದು, ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ.

Kannadascreens #sandalwood #FirstSalary #SudheendraVenkatesh #PavanVenkatesh #DVSudheendra #SunilSudheendra #DGVasudev #HariniSrikanth
