Kannada Beatz
News

ಅಪ್ಪು ಹಾಡುಗಳಿಗೆ ಸಮರ್ಜಿತ್ ಲಂಕೇಶ್ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಖ್ಯಾತ ನಟಿ ತಾನ್ಯ ಹೋಪ್ .

“ಗೌರಿ” ಚಿತ್ರತಂಡದಿಂದ ಪುನೀತ್ ರಾಜಕುಮಾರ್ ಅವರಿಗೆ ನೃತ್ಯ ನಮನ .

ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಅಪ್ಪು ಅವರ ಅಭಿಮಾನಿ ಎಂದು ಮಾತನಾಡಿದ ಸಮರ್ಜಿತ್, ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು “ಗೌರಿ” ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದರು.

ಇಂದ್ರಜಿತ್ ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ನಾನು ಸಹ ಪುನೀತ್ ಅವರ ಅಭಿಮಾನಿ‌ ಎಂದು ತಾನ್ಯ ಹೋಪ್ ತಿಳಿಸಿದರು.

ಈಗಾಗಲೇ “ಗೌರಿ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.

Related posts

ವಿಷ್ಣು ನೆನಪಲ್ಲಿ ಮತ್ತೆ ಶುರು YPL…ಮೇ‌4 ಮತ್ತು ಮೇ‌ 5ಕ್ಕೆ ಯಜಮಾನ ಪ್ರೀಮಿಯರ್ ಲೀಗ್

Kannada Beatz

ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ

Kannada Beatz

ಮತ್ತೆ ನಿರ್ದೇಶನಕ್ಕಿಳಿದ ಅರ್ಜುನ್ ಸರ್ಜಾ…ಮಗಳ ಚಿತ್ರಕ್ಕೆ ಆಕ್ಷನ್ ಕಿಂಗ್ ಆಕ್ಷನ್ ಕಟ್..

Kannada Beatz

Leave a Comment

Share via
Copy link
Powered by Social Snap