Kannada Beatz
News

ಡಾಲಿ ಧನಂಜಯ ಅಭಿನಯದ ಹೊಯ್ಸಳ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ .

ಖ್ಯಾತ ಗಾಯಕ ನಕಾಶ್ ಅಜೀಜ್ ಕಂಠಸಿರಿಯಲ್ಲಿ ಮೂಡಿಬಂದಿದೆ ಈ ಭರ್ಜರಿ ಮಾಸ್ ಸಾಂಗ್

ಡಾಲಿ ಧನಂಜಯ ನಾಯಕರಾಗಿ ಅಭಿನಯಿಸಿರುವ ಬಹು ನಿರೀಕ್ಷಿತ “ಹೊಯ್ಸಳ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ‌‌.
ತಮ್ಮ ಅಮೋಘ ಕಂಠದಿಂದ ಜನಪ್ರಿಯವಾಗಿರುವ ನಕಾಶ್ ಅಜೀಜ್ ಈ ಭರ್ಜರಿ ಮಾಸ್ ಸಾಂಗ್ ಅನ್ನು ಅಮೋಘವಾಗಿ ಹಾಡಿದ್ದಾರೆ. Rap ಗೆ ಯೋಗಿ ಬಿ ಧ್ವನಿಯಾಗಿದ್ದಾರೆ. ಸಂತೋಷ್ ಆನಂದರಾಮ್ ಈ ಹಾಡನ್ನು ಬರೆದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿಸಿ ಪಂದ್ಯದ ವೇಳೆ ಈ ಹಾಡು ಪ್ಲೇ ಆಗಿದೆ. ಕ್ರೀಡಾಂಗಣದಲ್ಲಿದ್ದ ಗಣ್ಯರು ಹಾಗೂ ಪ್ರೇಕ್ಷಕರು ಹಾಡಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಸಮಾಜಿಕ ತಾಣದಲ್ಲೂ ಹಾಡಿಗೆ ಭಾರೀ‌ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 30, ಶ್ರೀರಾಮನವಮಿ ಶುಭದಿನದಂದು ತೆರೆಗೆ ಬರಲಿದೆ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತೀಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸಿದ್ದಾರೆ.

ವಿಜಯ್ ನಾಗೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಧನಂಜಯ, ಜಯದೇವ ಹೊಯ್ಸಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೃತ ಅಯ್ಯಂಗಾರ್ ಈ ಚಿತ್ರದ ನಾಯಕಿ.
ಅಚ್ಯುತಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ಸುಂದರವಾಗಿದೆ “ಸುಮನ್” ಚಿತ್ರದ ಹಾಡುಗಳು.

Kannada Beatz

25 ದಿನ ಪೂರೈಸಿದ ಒಂದು ಸರಳ ಪ್ರೇಮ ಕಥೆ..ಎಲ್ಲಿ ಯಾವ ಒಟಿಟಿಗೆ ಎಂಟ್ರಿ ಕೊಡಲಿದೆ ವಿನಯ್ ರಾಜ್ ಕುಮಾರ್ ಸಿನಿಮಾ..?

Kannada Beatz

‘Zee5’ ಅಯ್ಯನ ಮನೆ ದಾಖಲೆ…100 ಮಿಲಿಯನ್ ಮಿನಿಟ್ ಸ್ಟ್ರೀಮಿಂಗ್ ಕಂಡ ಮಿನಿ ವೆಬ್ ಸರಣಿ

Kannada Beatz

Leave a Comment

Share via
Copy link
Powered by Social Snap