ಕರ್ಮದ ಕುರಿತಾದ ಈ ಚಿತ್ರ ಏಪ್ರಿಲ್ ಒಂದರಂದು ತೆರೆಗೆ .
ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು ಏಪ್ರಿಲ್ ಒಂದರಂದು ತೆರೆಗೆ ಬರಲು ಸಿದ್ದವಾಗಿದೆ “ಇನ್ ಸ್ಟಂಟ್ ಕರ್ಮ”.
ಈ ಹಿಂದೆ ” ಡಿ.ಕೆ.ಬೋಸ್” ಎಂಬ ಚಿತ್ರ ನಿರ್ದೇಶಿಸಿದ್ದೆ. ಇದು ನನ್ನ ಎರಡನೇ ಚಿತ್ರ. ನಾನು ಕೆಲವು ದಿನಗಳ ಹಿಂದೆ ನಮ್ಮ ತಾಯಿಯನ್ನು ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದೆ. ಅಲ್ಲಿ ನಡೆದ ಘಟನೆ ಈ ಚಿತ್ರಕ್ಕೆ ಸ್ಪೂರ್ತಿ. ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಸಂದೀಪ್ ಮಹಾಂತೇಶ್.
ನಿರ್ಮಾಪಕ ಸಂತೋಷ್ ಮಹಂತೇಶ್, ಚಿತ್ರದಲ್ಲಿ ಅಭಿನಯಿಸಿರುವ ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಧನಂಜಯ್, ಸಂಗೀತ ನಿರ್ದೇಶಕ ಸೂರಜ್ ಹಾಗೂ ಛಾಯಾಗ್ರಾಹಕ ಭಾಸ್ಕರ್ ಹೆಗಡೆ ತಮ್ಮ ಕಾರ್ಯಗಳ ಬಗ್ಗೆ ಮಾತನಾಡಿ, ಚಿತ್ರವನ್ನು ಬೆಂಬಲಿಸುವಂತೆ ಕೋರಿದರು.
ಈ ಚಿತ್ರ ಐದು ಹುಡುಗರ ಸುತ್ತ ಸಾಗುತ್ತದೆ. ಯಶ್ ಶೆಟ್ಟಿ, ಕೆಂಡ ಶ್ರೇಷ್ಠ, ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ ಹಾಗೂ ಹರಿ ಧನಂಜಯ್ ನಟಿಸಿದ್ದಾರೆ.