Kannada Beatz
News

ಪ್ರವೀಣ್ ತೇಜ್ ‘ಜಿಗರ್‌’ಗೆ ಧ್ವನಿಯಾದ ಸಂಚಿತ್ ಹೆಗ್ಡೆ: ರೊಮ್ಯಾಂಟಿಂಕ್ ಹಾಡು ರಿಲೀಸ್

ಸಂಚಿತ್ ಹೆಗ್ಡೆ ಧ್ವನಿಯಲ್ಲಿ ಮತ್ತೊಂದು ಹಾಡು: ಜಿಗರ್ ಮೂಲಕ ಮತ್ತೆ ಮೋಡಿ ಮಾಡಿದ ಗಾಯಕ

ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ‘ಜಿಗರ್’ ಎನ್ನುವ ಆಕ್ಷನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಜಿಗರ್ ಸದ್ಯ ಹಾಡಿನ ಮೂಲಕ ಆಮಂತ್ರಣ ನೀಡಿದೆ.

ಜಿಗರ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಮಾಸ್ ಸಿನಿಮಾ ಆಗಿದ್ದರೂ ಸದ್ಯ ರೊಮ್ಯಾಂಕ್ ಹಾಡಿನ ಮೂಲಕ ಮೋಡಿ ಮಾಡುತ್ತಿದ್ದಾರೆ ಪ್ರವೀಣ್. ಅಂದಹಾಗೆ ಸದ್ಯ ಬಿಡುಗಡೆಯಾಗಿರುವ ಈ ಹಾಡು ಗಾನಪ್ರಿಯರ ಹಾಟ್ ಫೇವರಿಟ್ ಸಿಂಗರ್ ಸಂಚಿತ್ ಹೆಗ್ಡೆ ಕಂಠದಲ್ಲಿ ಮೂಡಿಬಂದಿದೆ. ಸಂಚಿತ್ ಹಾಡಿರುವ ಬಹುತೇಕ ಹಾಡುಗಳು ಸೂಪರ್ ಹಟ್. ಜಿಗರ್ ಸಿನಿಮಾದ ಈ ರೊಮ್ಯಾಂಟಿಕ್ ಹಾಡು ಕೂಡ ಸಂಚಿತ್ ಧ್ವನಿಯಲ್ಲಿ ಅಷ್ಟೇ ಅದ್ಭುತವಾಗಿ ಮೂಡಿ ಬಂದಿದೆ.

‘ಸುಮ್ಮನೆ…..’ ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡಿಗೆ ರಿತ್ವಿಕ್ ಮುರಳಿಧರ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಅರ್ಜುನ್ ಲೂಯಿಸ್ ಸಾಹಿತ್ಯವಿದೆ. ಈಗಾಗಲೇ ಚಮಕ್, ವೆನಿಲ್ಲ, ಸಖತ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಅರ್ಜುನ್ ಇದೀಗ ಜಿಗರ್ ಸಿನಿಮಾದ ಹಾಡನ್ನೂ ಬರೆದಿದ್ದಾರೆ. ಈ ಸುಂದರ ಹಾಡನ್ನು ಕರಾವಳಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಮಲ್ಫೆ, ಮರುವಂತೆ, ಮಂಗಳೂರು ಸುತ್ತಮುತ್ತ ಸೆರೆಹಿಡಿಯಲಾಗಿದೆ. ಸಿನಿಮಾ ಕೂಡ ಇದೇ ಬ್ಯಾಕ್‌ಡ್ರಾಪ್‌ನಲ್ಲಿ ಇರಲಿದೆ.

ಅಂದಹಾಗೆ ಪ್ರವೀಣ್ ತೇಜ್ ಅವರನ್ನು ಆಕ್ಷನ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ಕರೆತರುತ್ತಿದ್ದಾರೆ ನಿರ್ದೇಶಕ ಸೂರಿ ಕುಂದರ್. ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸೂರಿ ಜಿಗರ್ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ನಿರ್ದೇಶಕ ಸೂರಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯು ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಗಿದ್ದು ಪೂಜಾ ವಸಂತ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ , ಶಿವಸೇನಾ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ ಕ್ಯಇನ್ನೂ ಈ ಸಿನಿಮಾದಲ್ಲಿ ಪ್ರವೀಣ್‌ಗೆ ನಾಯಕಿಯಾಗಿ ವಿಜಯ್ ಶ್ರೀ ಕಾಣಿಸಿಕೊಂಡಿದ್ದಾರೆ. ವಿಜಯ್ ಶ್ರೀ ಅವರಿಗೂ ಇದು ಮೊದಲ ಸಿನಿಮಾವಾಗಿದೆ.

ನಟ ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂದು ಎದುರುನೋಡುತ್ತಿದ್ದಾರೆ. ಕೊನೆಯದಾಗಿ ಪ್ರವೀಣ್ ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದರು. ಇದೀಗ ಜಿಗರ್ ಮೂಲಕ ಎಂಟ್ರಿಕೊಡುತ್ತಿದ್ದಾರೆ. ಸದ್ಯ ಹಾಡಿನ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿರುವ ಜಿಗರ್ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿಸಿದೆ.

Related posts

“ಹೊಸತರ”ದ ಮೂಲಕ ಹೊಸ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಅಫ್ಜಲ್ .

Kannada Beatz

%75 ಚಿತ್ರೀಕರಣ ಮುಗಿಸಿಕೊಂಡು ಶಿವಾಜಿ ಸುರತ್ಕಲ್2 ಚಿತ್ರತಂಡ

Kannada Beatz

ದಳಪತಿ ವಿಜಯ್ ಕೊನೆ ಸಿನಿಮಾ ‘ಜನನಾಯಗನ್’ ಓವರ್ ಸೀಸ್ ಹಕ್ಕಿಗೆ PHF film ಸಾರಥ್ಯ

Kannada Beatz

Leave a Comment

Share via
Copy link
Powered by Social Snap