Kannada Beatz
News

ಆರ್ ಚಂದ್ರು ತವರೂರು ಶಿಡ್ಲಘಟ್ಟದಲ್ಲಿ ಫೆಬ್ರವರಿ 26 ರಂದು ಬಿಡುಗಡೆಯಾಗಲಿದೆ ಕನ್ನಡದ ಹೆಮ್ಮೆಯ “ಕಬ್ಜ” ಚಿತ್ರದ ಕಮರ್ಷಿಯಲ್ ಸಾಂಗ್ .

ಅದ್ದೂರಿ ಸಮಾರಂಭದಲ್ಲಿ ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ಸಾಧ್ಯತೆ

ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಬಹು ನಿರೀಕ್ಷಿತ ಪ್ಯಾನ್ ಇಂಡಯಾ ಸಿನಿಮಾ “ಕಬ್ಬ”.

ಆರ್ ಚಂದ್ರು ನಿರ್ದೇಶಿಸಿರುವ “ಕಬ್ಜ” ಚಿತ್ರದ ಕಮರ್ಷಿಯಲ್ ಸಾಂಗ್ ಹಾಗೂ ಜೂಟ್ ಬಾಕ್ಸ್
ಇದೇ ಫೆಬ್ರವರಿ 26 ರಂದು ಶಿಡ್ಲಘಟ್ಟದಲ್ಲಿ ಬಿಡುಗಡೆಯಾಗಲಿದೆ. ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ಶಿಡ್ಲಘಟ್ಟ ಆರ್ ಚಂದ್ರು ಅವರ ತವರೂರು. ತಮ್ಮೂರಿನಲ್ಲಿ “ಕಬ್ಜ” ಚಿತ್ರದ ಅದ್ದೂರಿ ಸಮಾರಂಭ ಆಯೋಜಿಸಿರುವ ಆರ್ ಚಂದ್ರು, ಸಮಾರಂಭ ಯಶಸ್ವಿಯಾಗಿ ನಡೆಯಲು ಈಗಾಗಲೇ ತಯಾರಿ ಆರಂಭಿಸಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಪ್ರೇಮ್, ಶ್ರೇಯಾ ಶರಣ್ ಹಾಗೂ ಆಂದ್ರ, ತಮಿಳುನಾಡು, ಕೇರಳದಿಂದ ಸಹ ಪ್ರಮುಖ ಗಣ್ಯರು ಈ ವರ್ಣರಂಜಿತ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ.
ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ
ಬಹು ನಿರೀಕ್ಷಿತ “ಕಬ್ಜ” ಚಿತ್ರ ಮಾರ್ಚ್ 17 ರಂದು ತೆರೆಗೆ ಬರಲಿದೆ.

Related posts

ಮೊದಲ ಹಂತ ಮುಗಿಸಿದ ಸುಕನ್ಯದ್ವೀಪ

administrator

’ಒಂದು ಸರಳ ಪ್ರೇಮಕಥೆ’ ಶೂಟಿಂಗ್ ಕಂಪ್ಲೀಟ್..ವಿನಯ್-ಸುನಿ ಸಂಗಮದ ಚಿತ್ರದಲ್ಲಿ ರಾಘಣ್ಣ..

Kannada Beatz

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್ ಗೆ ಮೆಚ್ಚುಗೆಯ ಮಹಾಪೂರ.

Kannada Beatz

Leave a Comment

Share via
Copy link
Powered by Social Snap