Kannada Beatz
News

ರಿವೀಲ್ ಆಯ್ತು ‘ದಸರಾ’ದಲ್ಲಿ ಕೀರ್ತಿ ಸುರೇಶ್ ಲುಕ್ – ಹಳ್ಳಿ ಹುಡುಗಿಯಾಗಿ ಮಿಂಚಲಿದ್ದಾರೆ ಮಹಾನಟಿ

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ‘ದಸರಾ’ ಸಿನಿಮಾ ಈಗಾಗಲೇ ಸಿನಿ ಪ್ರಿಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಮೂಲಕ ನಾನಿ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ತಲುಪಲಿದ್ದು, ಮಾಸ್ ಅವತಾರದಲ್ಲಿ ರಂಜಿಸಲಿದ್ದಾರೆ. ಖಡಕ್ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ನಾನಿಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ನಾಯಕ ನಟಿಯಾಗಿ ಅಭಿನಯಿಸುತ್ತಿದ್ದಾರೆ.

ಮಾಸ್ ಸಿನಿಮಾ ‘ದಸರಾ’ದಲ್ಲಿ ಕೀರ್ತಿ ಸುರೇಶ್ ಯಾವ ರೀತಿ ಕಾಣಸಿಗುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿ ಬಳಗದಲ್ಲಿತ್ತು. ಆ ಕುತೂಹಲವನ್ನು ಹಾಗೆ ಕಾಪಾಡಿಕೊಂಡು ಬಂದಿದ್ದ ಚಿತ್ರತಂಡ ಕೀರ್ತಿ ಸುರೇಶ್ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ರಿವೀಲ್ ಮಾಡಿದೆ. ನಾನಿ ಹೊಸ ಅವತಾರ ಖಡಕ್ ಲುಕ್ ಕಂಡು ಫಿದಾ ಆಗಿದ್ದ ಸಿನಿರಸಿಕರಿಗೆ, ಕೀರ್ತಿ ಸುರೇಶ್ ಲುಕ್ ಕೂಡ ಅಷ್ಟೇ ಮನಸೆಳೆದಿದೆ. ಚಿತ್ರದಲ್ಲಿ ವೆನ್ನಲ ಪಾತ್ರವನ್ನು ನಿಭಾಯಿಸುತ್ತಿದ್ದು, ಹಳ್ಳಿ ಹುಡುಗಿಯಾಗಿ ಹಳದಿ ಸೀರೆಯಲ್ಲಿ ಮಿಂಚುತ್ತಿರುವ ಕೀರ್ತಿ ಅವತಾರಕ್ಕೆ ಎಲ್ಲರೂ ಕ್ಲೀನ್ ಬೋಲ್ಡ್ ಆಗಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ನಾನಿ ಫಸ್ಟ್ ಲುಕ್, ಧೂಮ್ ದಾಮ್ ದೊಸ್ತಾನ ಹಾಡು ಸಿನಿ ಪ್ರಿಯರಿಂದ ಅದ್ಭುತ ರೆಸ್ಪಾನ್ ಪಡೆದುಕೊಂಡಿದೆ. ಇದೀಗ ಕೀರ್ತಿ ಸುರೇಶ್ ಲುಕ್ ಕೂಡ ಎಲ್ಲರ ಗಮನ ಸೆಳೆದಿದೆ. ಇವೆಲ್ಲವೂ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಶ್ರೀಕಾಂತ್ ಒಡೆಲಾ ನಿರ್ದೇಶಿಸುತ್ತಿರುವ ಈ ಚಿತ್ರ ಮಾಸ್ ಅಂಡ್ ಆಕ್ಷನ್ ಕಥಾಹಂದರ ಒಳಗೊಂಡಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. 2023 ಮಾರ್ಚ್ 30ರಂದು ಸಿನಿಮಾ ಬಿಡುಗಡೆಯಾಗಲಿದೆ.

ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ, ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

Related posts

ಧನ್ವೀರ್ ಹುಟ್ಟುಹಬ್ಬಕ್ಕೆ ಹೊಸಚಿತ್ರದ ಘೋಷಣೆ

Kannada Beatz

ನಟ ರಾಕ್ಷಸ ಡಾಲಿ ಧನಂಜಯ ಅವರಿಂದ ಬಿಡುಗಡೆಯಾಯಿತು “ರವಿಕೆ ಪ್ರಸಂಗ” ಚಿತ್ರದ ಟ್ರೇಲರ್

Kannada Beatz

ಹಳೆಯ ಕನ್ನಡ ಹಾಡುಗಳಿಗೆ ನೃತ್ಯ‌ ಮಾಡಿ ವೈರಲ್ ಆದ ಸ್ನೇಹಿತರಿಂದ ಹೊಸ ಕನ್ನಡ ಆಲ್ಬಮ್ ಹಾಡು

Kannada Beatz

Leave a Comment

Share via
Copy link
Powered by Social Snap