Kannada Beatz
News

‘ಜೂನಿಯರ್’ ಎಂಟ್ರಿಗೆ ಡೇಟ್ ಫಿಕ್ಸ್..ಜುಲೈ 18ಕ್ಕೆ ಕಿರೀಟಿ ಚೊಚ್ಚಲ ಚಿತ್ರ ರಿಲೀಸ್

ಕಿರೀಟಿ ಚೊಚ್ಚಲ ಸಿನಿಮಾ ಬಿಡುಗಡೆಗೆ ರೆಡಿ..ಜುಲೈ 18ಕ್ಕೆ ‘ಜೂನಿಯರ್’ ಎಂಟ್ರಿ

ಜೂನಿಯರ್ ಆಗಿ ತೆರೆಗೆ ಎಂಟ್ರಿ ಕೊಡಲು ಕಿರೀಟಿ ರೆಡಿ…ಜುಲೈ 18ಕ್ಕೆ ಪಂಚ ಭಾಷೆಯಲ್ಲಿ ಸಿನಿಮಾ ರಿಲೀಸ್

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು ಗೊತ್ತೇ ಇದೆ. ಎಸ್ ಎಸ್ ರಾಜಮೌಳಿಯವರು ಕ್ಲ್ಯಾಪ್ ಮಾಡಿ ಕಿರೀಟಿ ಹೊಸ ಪಯಣಕ್ಕೆ ಶುಭ ಹಾರೈಸಿದ್ದರು. ಇದೀಗ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

ಕಿರೀಟಿ ನಾಯಕನಾಗಿ ಚಿತ್ರರಂಗಕ್ಕೆ ಚೊಚ್ಚಲ ಹೆಜ್ಜೆ ಇಟ್ಟಿರುವ ಜೂನಿಯರ್ ಸಿನಿಮಾ ತೆರೆಗೆ ಬರುವ ದಿನಾಂಕ‌ ನಿಗದಿಯಾಗಿದೆ. ಜುಲೈ 18ಕ್ಕೆ ಜೂನಿಯರ್ ಚಿತ್ರ ಬೆಳ್ಳಿಪರದೆ ಅಖಾಡಕ್ಕೆ ಇಳಿಯುತ್ತಿದೆ.

ಪಂಚ ಭಾಷೆಯಲ್ಲಿ ರಿಲೀಸ್

ಕಿರೀಟಿ ಮೊದಲ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಜೂನಿಯರ್ ಸಿನಿಮಾ ರಿಲೀಸ್ ಆಗಲಿದೆ.

‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಜೂನಿಯರ್ ಸಿನಿಮಾ ತಯಾರಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಚಿತ್ರ‌ ಮೂಡಿ ಬಂದಿದೆ. ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್.

‘ಕ್ರೇಜಿಸ್ಟಾರ್’ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್ ಜೂನಿಯರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಿರೀಟಿಗೆ ಜೋಡಿಯಾಗಿ ನಟಿ ಶ್ರೀಲೀಲಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇನ್ನೂ ಹಲವು ತಾರೆಯರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಜೂನಿಯರ್ ಸಿನಿಮಾದ ತಾಂತ್ರಿಕ ಬಳಗ ಶ್ರೀಮಂತಿಕೆಯಿಂದ ಕೂಡಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್ ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.

ಸೌಂಡ್ ಮಾಡಿದ್ದ ಇಂಟ್ರೂಡಕ್ಷನ್ ಟೀಸರ್

ಕಿರೀಟಿ ಅವರನ್ನು ಇಂಟ್ರಡ್ಯೂಸ್ ಮಾಡಲು ಟೀಸರ್ ಒಂದನ್ನು ರಿಲೀಸ್ ಮಾಡಲಾಗಿತ್ತು. ಈ ಟೀಸರ್ನಲ್ಲಿ ಸ್ಟಂಟ್ಗಳನ್ನು ಮಾಡಿ ಅವರು ಗಮನ ಸೆಳೆದಿದ್ದರು.

ಇದೇ ತಿಂಗಳ 19ಕ್ಕೆ ಮೊದಲ ಹಾಡು ರಿಲೀಸ್
ಜೂನಿಯರ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ಚಿತ್ರತಂಡ ಪ್ರಚಾರದ ಕಾರ್ಯಕ್ಕೂ ಪ್ಲ್ಯಾನ್ ಹಾಕಿಕೊಂಡಿದೆ. ಇದೇ ತಿಂಗಳ 19ಕ್ಕೆ ಮೊದಲ ಹಾಡು ರಿಲೀಸ್ ಮಾಡಿ, ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಡಲಿದೆ.

Related posts

QUIT MUSIC VIDEO

Kannada Beatz

ಸದ್ದು ಮಾಡುತ್ತಿದೆ “ಸಾವಿತ್ರಿ” ಚಿತ್ರದ ಹಾಡುಗಳು.

Kannada Beatz

ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’

Kannada Beatz

Leave a Comment

Share via
Copy link
Powered by Social Snap